Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    Election

    ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.

    vartha chakraBy vartha chakraMay 16, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.16:
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಈ ಬಗ್ಗೆ ಸರ್ಕಾರ ಗಮನ ಹರಿಸದೆ ನೌಕರರ ವರ್ಗಾವಣೆಯಲ್ಲಿ ‌ನಿರತವಾಗಿದೆ. ವರ್ಗಾವಣೆಯ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿ.ರಾಜೀವ್‌ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದರು.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಸಮಾಜಘಾತುಕ ಶಕ್ತಿಗಳು, ಮೂಲಭೂತವಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸರ್ಕಾರ ಜನಸಾಮಾನ್ಯರಿಗೆ ರಕ್ಷಣೆ ಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು
    ಅಶ್ವತ್ಥನಾರಾಯಣ ಕಿಡಿಕಾರಿದರು.
    ಒಂದು ವರ್ಷದಲ್ಲಿ ಕೊಲೆ, ಸುಲಿಗೆ, ಮತಾಂತರ ತುಷ್ಟೀಕರಣದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶೂನ್ಯ ಅಭಿವೃದ್ಧಿ ಮತ್ತು ಅಸಮರ್ಥ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಕಾಂಗ್ರೆಸ್‌‍ನ ಸಾಧನೆ ಎಂದು ವ್ಯಂಗ್ಯವಾಡಿದರು.
    ಯಾವಾಗ ಏನು ಆಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಗೃಹ ಇಲಾಖೆ ನಿರ್ವಹಣೆ ಮಾಡುವಲ್ಲಿ ಸಚಿವ ಡಾ.ಜಿ.ಪರಮೇಶ್ವರ್‌ ವಿಫಲರಾಗಿದ್ದಾರೆ. ತಕ್ಷಣವೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
    ಆಡಳಿತ ನಡೆಸಲು ಸರ್ಕಾರ ವಿಫಲವಾಗಿದೆ. ಜನರು ಏಕಾದರೂ ಇಂತಹ ಪಕ್ಷವನ್ನು ಅಧಿಕಾರಕ್ಕೆ ತಂದೆವೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಶೇ. 60 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು.
    ಹುಬ್ಬಳ್ಳಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಎರಡು ಕಗ್ಗೊಲೆಗಳಾಗಿವೆ. ನೇಹಾ ಹತ್ಯೆ ಬಳಿಕ ಇದೀಗ ಅಂಜಲಿ ಕೊಲೆಯಾಗಿದೆ. ಈ ಬಂಡ ಸರ್ಕಾರದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಇಲ್ಲವಾಗಿದೆ. ಕೊಲೆ, ಸುಲಿಗೆ ವಸೂಲಿ ನಿರಂತರವಾಗಿ ನಡೆಯುತ್ತಿವೆ. ಒಂದು ರೀತಿ ಬಂಡ ರೀತಿಯಲ್ಲಿ ಸರ್ಕಾರ ವರ್ತನೆ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.
    ಪಿ.ರಾಜೀವ್ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಲಾಖೆಯಲ್ಲಿನ ಆಯಕಟ್ಟಿನ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಿದರೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ಇಲಾಖೆಯಲ್ಲೂ ಒಂದೊಂದು ಹುದ್ದೆಗೆ ಇಂತಿಷ್ಟು ಎಂದು ದರ ನಿಗದಿಪಡಿಸಲಾಗಿದೆ ಎಂದು ಕಿಡಿಕಾರಿದರು.
    ಸರ್ಕಾರಕ್ಕೆ ಜೀವ ಇದೆಯೇ? ಅಥವಾ ಸತ್ತು ಹೋಗಿದೆಯೇ? ಮಹಿಳೆಯರು, ದಲಿತರು, ಅಮಾಯಕರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ರಾಜ್ಯಪಾಲರು ವಜಾ ಮಾಡಬೇಕೆಂದು ಆಗ್ರಹಿಸಿದರು
    ಜನರ ರಕ್ಷಣೆ, ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಕೊಲೆಗಡುಕರ ತಾಣವಾಗಿದೆ ಎಂದರು.
    ಪ್ರಮುಖ ಆರೋಪಿಗಳನ್ನು ಬಿಟ್ಟು ಅಮಾಯಕರ ಮೇಲೆ ದೂರು ದಾಖಲಿಸಲಾಗುತ್ತದೆ. ವಿದ್ಯಾರ್ಥಿನಿ ಅಂಜಲಿ ಕೊಲೆಗೂ ಮುನ್ನ ನಿನ್ನನ್ನು ನೇಹಾ ರೀತಿಯಲ್ಲಿ ಕೊಲೆ ಮಾಡುತ್ತೇನೆಂದು ಆರೋಪಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಅವಳಿಗೆ ಸಂಬಂಧಪಟ್ಟವರು ದೂರು ಕೊಟ್ಟಿದ್ದರೂ ಇದನ್ನು ಪೊಲೀಸರು ಮೂಢನಂಬಿಕೆ ಎಂದು ಹೇಳಿದ್ದಾರೆ. ಮೊದಲು ಈ ಅಧಿಕಾರಿಗಳನ್ನು ಸೇವೆಯಿಂದಲೇ ಶಾಶ್ವತವಾಗಿ ವಜಾಗೊಳಿಸಬೇಕೆಂದು ಒತ್ತಾಯ ಮಾಡಿದರು.

    Verbattle
    Verbattle
    Verbattle
    #cnashwathnarayana Bangalore BJP bjpkarnataka Congress Government Karnataka Politics ಕಾಂಗ್ರೆಸ್ ಕಾನೂನು ಕೊಲೆ ರಾಜಕೀಯ ವಿದ್ಯಾರ್ಥಿ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.
    Next Article ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. Xghhdb on February 13, 2026 3:46 pm

      betmgm IA betmgm РњРћ betmgm РњРћ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LinwoodGah on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Glennhof on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.