ಬೆಂಗಳೂರು.
ವಿಧಾನಸಭೆ Election ಸಮಯದಲ್ಲಿ ನೀಡಿದ ಭರವಸೆಯಂತೆ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಇದೀಗ ಸರ್ಕಾರ ಪರಿಷ್ಕರಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ ಈ ನಡುವೆ,
ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದು ಹೇಳಿದರು
Previous Articleಗ್ಯಾರಂಟಿ ನಿಲ್ಲೋದಿಲ್ಲ ಅಂದ್ರು ಮಂತ್ರಿ ಖಂಡ್ರೆ.
Next Article ಗ್ಯಾರಂಟಿ ಯೋಜನೆ ಯಾರಿಗೆ ಬೇಡ ಗೊತ್ತಾ..