ಬೆಂಗಳೂರು,ಆ.20:
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಿಂದುಳಿದ ವರ್ಗಗಳ ವಿರೋಧಿ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ಪ್ರತಿ ತಂತ್ರ ಹೆಣದಿದೆ.
ಕಾಂಗ್ರೆಸ್ಸಿನ ಈ ತಂತ್ರಕ್ಕೆ ಪ್ರತಿಯಾಗಿ ಬಿಜೆಪಿ ಹೊಸದೊಂದು ಪ್ರತಿ ತಂತ್ರ ರೂಪಿಸಿದ್ದು ಕಾಂಗ್ರೆಸ್ ಪಕ್ಷವನ್ನು ದಲಿತ ವಿರೋಧಿ ಎಂದು ಬಿಂಬಿಸಲು ಮುಂದಾಗಿದೆ.
ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ
ರಾಜ್ಯಪಾಲರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು
ಪರಿಶಿಷ್ಟ ಸಮುದಾಯಕ್ಕೆ ಸೇರಿದ ರಾಜ್ಯಪಾಲ ತಾವರ ಚೆಂದ್ ಗೆಹಲೋಟ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.
ಕಾಂಗ್ರೆಸ್ ಎಂದಿಗೂ ಪರಿಶಿಷ್ಟ ಸಮುದಾಯಗಳನ್ನು ಸಹಿಸುವುದಿಲ್ಲ ಇದಕ್ಕೆ ದೊಡ್ಡ ಚರಿತ್ರೆ ಇದೆ ಈಗಲೂ ಪರಿಶಿಷ್ಟ ಸಮುದಾಯದ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸಲಾಗಿದೆ ಹೀಗಾಗಿ ಈ ಎಲ್ಲ ಶಾಸಕ ಮತ್ತು ಮಂತ್ರಿಗಳ ವಿರುದ್ಧ ಗುಂಡಾ ಕಾಯ್ದೆ ಅಡಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದೆ.
ಬಿಜೆಪಿ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಲಾಗಿದ್ದು ಇದೇ ರೀತಿ ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ನಾಯಕರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.