Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ನಿಯಂತ್ರಣಕ್ಕೆ ಕಾರ್ಯಪಡೆ.
    Trending

    ಡ್ರಗ್ಸ್ ನಿಯಂತ್ರಣಕ್ಕೆ ಕಾರ್ಯಪಡೆ.

    vartha chakraBy vartha chakraSeptember 18, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.18:
    ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಅಂಕುಶ ಹಾಕುವ ಮೂಲಕ ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸರ್ಕಾರ ಪಣ ತೊಟ್ಟಿದೆ.
    ಇದಕ್ಕಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಪ್ರತ್ಯೇಕ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
    ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ತಡೆಗಟ್ಟುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಪೊಲೀಸ್ ಹಾಗೂ ಇತರೆ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
    ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಡ್ರಗ್ಸ್ ಜಾಲದ ಬೇರುಗಳನ್ನು ಕತ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಇರಲಿದ್ದಾರೆ ಎಂದು ಹೇಳಿದರು.
    ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಡ್ರಗ್ಸ್ ದಂಧೆ ನಡೆದರೆ ಠಾಣಾಧಿಕಾರಿ ಡಿವೈಎಸ್ಪಿ, ಎಸಿಪಿ ಮತ್ತು ಎಸ್ಪಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಡ್ರಗ್ಸ್ ದಂಧೆ ಹತ್ತಿಕ್ಕಲು ಅಗತ್ಯ ಬಿದ್ದರೆ ಹೊಸ ಕಾನೂನು ಜಾರಿಗೆ ತರುತ್ತೇವೆ.ಹೀಗಿರುವ ಕಾನೂನನ್ನು ಇನ್ನಷ್ಟು ಬಿಗಿಗೊಳಿಸುತ್ತೇವೆ. ಫೆಡ್ಲರ್‌ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನಿಗೆ ತಿದ್ದುಪಡಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
    ಡ್ರಗ್ಸ್ ಹಾವಳಿ ತಡೆಯಲು ಕ್ಷಿಪ್ರ ಮತ್ತು ತೀಕ್ಷ್ಣಕ್ರಮ ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಎನ್‌ಸಿಸಿ, ಎನ್‌ಜಿಓಗಳನ್ನು ಬಲಗೊಳಿಸುವುದರ ಜತೆಗೆ ಪುನರ್‌ವಸತಿ ಕೇಂದ್ರಗಳನ್ನು ಹೆಚ್ಚಿಸಲು ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.
    ಡ್ರಗ್ಸ್ ಸೇವನೆಯಿಂದಾಗಿ ವಿದ್ಯಾರ್ಥಿ, ಯುವ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ. ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೂ ಅಂಕುಶ ಹಾಕುವುದಾಗಿ ಹೇಳಿದರು.
    ಡ್ರಗ್ಸ್ ದಂಧೆ ತಡೆಗೆ ಪೊಲೀಸರಿಗೆ ಮುಕ್ತ ಅವಕಾಶ ಕೊಡುತ್ತೇವೆ. ಒಂದು ವೇಳೆ ಡ್ರಗ್ ದಂಧೆಗೆ ಕಡಿವಾನ ಹಾಕಲು ವಿಫಲವಾದರೆ ಅವರನ್ನೇ ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಎಚ್ಚರಿಸಿದರು.
    ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜತೆ ಉನ್ನತಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿ, ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿ ತಡೆಗೆ ಗಂಭೀರಚರ್ಚೆ ನಡೆಸಿದ್ದೇವೆ.ಈಗಾಗಲೇ ಇರುವ ರಾಜ್ಯಮಟ್ಟದ ಸಮಿತಿಯಿಂದ ಮಾಹಿತಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು
    ಬೆಂಗಳೂರಿನ ಪೂರ್ವ ಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಲಗಾಮು ಹಾಕಲು ನಿರ್ಣಯ ಮಾಡಿದ್ದೇವೆ ಎಂದ ಅವರು, ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಂದ ಮಾದಕವಸ್ತು ರಾಜ್ಯಕ್ಕೆ ಸರಬರಾಜು ಆಗುತ್ತಿದೆ. ಇದನ್ನು ತಡೆಗಟ್ಟಲು ಹೊಸ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು

    Verbattle
    Verbattle
    Verbattle
    Bangalore BJP Congress Government Karnataka News Politics Varthachakra ಆರೋಗ್ಯ ಕಾನೂನು ಡ್ರಗ್ಸ್ ವಿದ್ಯಾ ವಿದ್ಯಾರ್ಥಿ ಶಿಕ್ಷಣ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleA.I.ನಿಂದ ಅವಾಂತರ ಸೃಷ್ಟಿ.
    Next Article ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    7 Comments

    1. Dcsute on February 11, 2026 9:55 pm

      betmgm MS betmgm-play betmgm Louisiana

      Reply
    2. Pukpgp on February 19, 2026 7:00 pm

      Synchronize your plays with rhythmic slots and rhythmic wins. crowncoins casino provides demo modes for practice. Hone your skills and go for gold!

      Reply
    3. Insoez on February 26, 2026 1:06 am

      Prairie thunder roars with every reel turn. buffalo slot free play offers sunset magic, bonus buffs, and massive cash herds. Join now!

      Reply
    4. Cgydep on February 28, 2026 3:19 am

      New to Chumba? You’ll get chumba casino review just for creating an account. Spin incredible slots and turn Sweeps into real prizes — try it today!

      Reply
    5. Jskstj on March 2, 2026 6:07 am

      Tired of slow fiat casinos? stake wheel game gives you instant crypto action and real high limits. Join the revolution today.

      Reply
    6. Ihzweg on March 3, 2026 11:23 pm

      Experience DraftKings new games Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    7. Jecowv on March 7, 2026 12:36 am

      Opravdovalekarna.cz – kde se kvalita nepotkava s vysokou cenou
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Eeesdm on ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    • Svcety on ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.