Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿನ್ನರ್ ಪಾಲಿಟಿಕ್ಸ್ ನ ವಿವಾದ
    ರಾಜಕೀಯ

    ಡಿನ್ನರ್ ಪಾಲಿಟಿಕ್ಸ್ ನ ವಿವಾದ

    vartha chakraBy vartha chakraJanuary 8, 202524 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.8-
    ಪರಿಶಿಷ್ಟ ಜಾತಿ ಮತ್ತು ವರ್ಗದ ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ಹೈಕಮಾಂಡ್ ನಡೆಗೆ ಇದೀಗ ಕಾಂಗ್ರೆಸ್ಸಿನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
    ಗೃಹ ಮಂತ್ರಿ ಪರಮೇಶ್ವರ್ ಲೋಕೋಪಯೋಗಿ ಮಂತ್ರಿ ಸತೀಶ ಜಾರಕಿಹೊಳಿ ಮತ್ತು ಸಹಕಾರ ಮಂತ್ರಿ ರಾಜಣ್ಣ ಹೈಕಮಾಂಡ್ ನಡೆಯ ಬಗ್ಗೆ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ
    ತಮ್ಮ ಸಮುದಾಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲು ಗೃಹಮಂತ್ರಿ ಪರಮೇಶ್ವರ ಅವರು ಶಾಸಕರು ಮತ್ತು ಮಂತ್ರಿಗಳ ಸಭೆ ಆಯೋಜಿಸಿದ್ದರು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಆದರೂ ಈ ಸಭೆ ಯಾಕೆ ರದ್ದಾಯಿತು ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಸಭೆಯಲ್ಲಿ ನಾವು ಮಾತನಾಡಿಕೊಳ್ಳುತ್ತೇವೆ ಊಟ ಮಾಡುತ್ತೇವೆ ಈ ಬಗ್ಗೆ ಡಿ.ಕೆ.ಶಿವಕುಮಾರ್ ಗಾಗಲೀ, ಬೇರೆ ಯಾರಿಗೇ ಆಗಲಿ ಆತಂಕ ಬೇಡ‌ ಎಂದು ಹೇಳಿದರು.
    ಸಭೆ ರದ್ದಾಗಿರುವ ಬಗ್ಗೆ ಬಗ್ಗೆ ಗೃಹ ಮಂತ್ರಿ ಪರಮೇಶ್ವರ್ ಅವರ ಕುರಿತಂತೆ ಮಾತುಕತೆ ನಡೆಸುತ್ತೇನೆ ಅವರಿಂದ ಮಾಹಿತಿ ಪಡೆದ ನಂತರ
    ಮುಂದಿನ ದಿನಗಳಲ್ಲಿ ಸಭೆ ಸೇರುವ ಬಗ್ಗೆ ಹೈಕಮಾಂಡ್ ನಾಯಕರ ಮನವೊಲಿಸಲಾಗುವುದು. ರಾಜಕೀಯದಲ್ಲಿ ಹಿನ್ನಡೆ, ಮುನ್ನಡೆ ಸಹಜ. ಇಲ್ಲಿ ಸೋಲು-ಗೆಲುವು ಎಂಬುದನ್ನು ಪರಿಗಣಿಸಬೇಕಿಲ್ಲ. ಒಮೆ ನಾವು ಗೆಲ್ಲುತ್ತೇವೆ, ಇನ್ನೊಮೆ ಬೇರೆಯವರು ಗೆಲ್ಲುತ್ತಾರೆ. ರಾಜಕೀಯದಲ್ಲಿ ಈ ರೀತಿಯ ಮುಸುಕಿನ ಗುದ್ದಾಟಗಳು ಇದ್ದೇ ಇರುತ್ತವೆ ಎಂದು ಹೇಳಿದರು
    ಮುಂದಿನ ದಿನಗಳಲ್ಲಿ ಗೃಹಸಚಿವರು ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಸಭೆಯ ದಿನಾಂಕ ನಿಗದಿ ಮಾಡಲಿದ್ದಾರೆ. ಸಭೆ ನಡೆಸಬಾರದು ಎಂದು ಯಾರೂ ಹೇಳಿಲ್ಲ. ಹೈಕಮಾಂಡ್ ಗಮನಕ್ಕೆ ಹೋಗಿರುವುದರಿಂದ ಅದರಲ್ಲೂ ಪರ-ವಿರೋಧ ಇರುವುದರಿಂದ ಹೈಕಮಾಂಡ್ ಅನುಮತಿ ಪಡೆದು ಸಭೆ ನಡೆಸಲಾಗುವುದು ಎಂದರು.
    ಸುಮ್ಮನಿರೋಲ್ಲಾ:
    ಗೃಹ ಮಂತ್ರಿ ಪರಮೇಶ್ವರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ ತಾವು ಕರೆದಿದ್ದ ಸಭೆಯನ್ನು ರದ್ದುಗೊಳಿಸಿಲ್ಲ. ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಭೆಯನ್ನು ಯಾರಾದರೂ ವಿರೋಧಿಸಿದರೆ ಅವರಿಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ನಮಗಿದೆ ಎಂದು ಸವಾಲು ಹಾಕಿದರು.
    ಚಿತ್ರದುರ್ಗ ಸಮಾವೇಶದ ಹಿನ್ನೆಲೆಯಲ್ಲಿ ಸಮುದಾಯದ ಬಹಳಷ್ಟು ಬೇಡಿಕೆಗಳು ಈಡೇರಿವೆ. ಅವುಗಳ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ತಡರಾತ್ರಿ ಸಭೆ ನಿಗದಿಯಾಗಿದ್ದರಿಂದಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದನ್ನು ಬೇರೆ ರೀತಿ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಅಲ್ಲ ಎಂದರು.
    ಇದು ಆಂತರಿಕವಾದ ಸಭೆಯಾದ್ದರಿಂದ ಹೈಕಮಾಂಡ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಮಗೆ ಕರೆ ಮಾಡಿ ತಾವು ಸಭೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದರು. ಸಭೆಗೆ ಬರುವಂತೆ ಅವರಿಗೆ ಕರೆ ನೀಡಲಾಯಿತು. ಆದರೆ ಸದ್ಯಕ್ಕೆ ಕಾಲಾವಕಾಶ ಇಲ್ಲ. ಹಾಗಾಗಿ ಸಭೆಯನ್ನು ಮುಂದೂಡಿ ಎಂದು ಸಲಹೆ ನೀಡಿದರು. ನಮ್ಮ ಸಭೆಗೆ ಹೈಕಮಾಂಡ್ ನಾಯಕರು ಭಾಗವಹಿಸುವುದಾದರೆ ಅದು ಇನ್ನೂ ಒಳ್ಳೆಯದು. ಹೀಗಾಗಿ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಸಮಯ ನೋಡಿಕೊಂಡು ಸಭೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು.
    ಸಭೆಯನ್ನು ನಿಲ್ಲಿಸಲು ಬೇರೆಯವರು ಪ್ರಭಾವ ಬೀರಿದ್ದಾರೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದ ಅವರು, ಒಂದು ವೇಳೆ ಗೊತ್ತಿದ್ದರೂ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
    ಸಭೆ ನಡೆಸುವುದು ರಹಸ್ಯವೇನಲ್ಲ. ನಾವು ರಾಜಕಾರಣ ಮಾಡಬೇಕು ಎಂದಾದರೆ ಬಹಿರಂಗವಾಗಿಯೇ ಮಾಡುತ್ತೇವೆ. ನಾಲ್ಕು ಗೋಡೆ ಮಧ್ಯೆ ರಹಸ್ಯ ಸಭೆ ನಡೆಸುವ ಅಗತ್ಯ ನಮಗಿಲ್ಲ. ದಲಿತ ಸಮುದಾಯದಲ್ಲಿ ಅನೇಕ ಸಮಸ್ಯೆಗಳಿವೆ. ಇದರ ಬಗ್ಗೆ ಚರ್ಚೆ ಮಾಡುವುದು ತಪ್ಪೇನೂ ಅಲ್ಲ ಎಂದು ತಿಳಿಸಿದರು.
    ಕೆ.ಎನ್.ರಾಜಣ್ಣ ಕಿಡಿ:
    ಗೃಹ ಮಂತ್ರಿ ಪರಮೇಶ್ವರ್ ಕರೆದಿದ್ದ ಔತಣಕೂಟ ರದ್ದುಗೊಂಡ ಕುರಿತು ಪ್ರತಿಕ್ರಿಯೆ ನೀಡಿರುವ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಮುಖ್ಯಮಂತ್ರಿ ಮತ್ತು ಸಚಿವರ ಡಿನ್ನರ್ ಸಭೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬೇಜಾರಾಗಿ, ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್ ಬೇಜಾರಾಗಲು ಯಾರಾದರು ಅವರ ಆಸ್ತಿ ಬರೆಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.
    ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದವರಿಗೆ ಹಾಸ್ಟೆಲ್ ಪ್ರವೇಶ ನೀಡುತ್ತಿಲ್ಲ. ಇಂತಹ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಸಭೆ ಮಾಡಬೇಡಿ ಎಂದರೆ ಇವರು ಪರಿಶಿಷ್ಟ ಸಮುದಾಯದ ವಿರೋಧಿಗಳೇ? ಇದು ಬಹಳ ದಿನ ನಡೆಯುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದ ಸಭೆಗೆ ರಾಜಕೀಯ ಲೇಪನ ಕೊಟ್ಟು, ವಿರೋಧ ವ್ಯಕ್ತಪಡಿಸುವುದು ಪರಿಶಿಷ್ಟ ಸಮುದಾಯಗಳಿಗೆ ಮಾಡುವ ಅನ್ಯಾಯ ಎಂದು ಕಿಡಿಕಾರಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚಿತ್ರದುರ್ಗ ನ್ಯಾಯ Bengaluru ರಾಜಕೀಯ ವಿದ್ಯಾ ವಿದ್ಯಾರ್ಥಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಸಹನೆಯಿಂದ ಸಹಿಸುತ್ತಿದ್ದಾರಂತೆ
    Next Article ಹೀರಾ ಡೈಮಂಡ್ ಒಡತಿಯ‌ ವಂಚನೆ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_kxSa on ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • reklamnii kreativ_ucOi on ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • Williamlop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.