ಬೆಂಗಳೂರು, ಜ.27:
ಹ್ಯಾಟ್ರಿಕ್ ಹೀರೋ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಹಿಸುದ್ದಿ. ಮೂತ್ರ ಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಇದೀಗ ಶಸ್ತ್ರಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿದ್ದು ಮುಂದಿನ ತಿಂಗಳಿನಿಂದ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಶಿವರಾಜ್ ಕುಮಾರ್ ಅವರ ಕೈಯಲ್ಲಿ ಸಾಕಷ್ಟು ಚಿತ್ರಗಳಿದ್ದು ಒಂದೆರಡು ಸಿನಿಮಾಗಳು ಕೊನೆಯ ಹಂತ ತಲುಪಿದೆ ಆ ಎಲ್ಲವನ್ನು ಮುಂದಿನ ತಿಂಗಳಿನಿಂದ ಪಟ್ಟಾಗಿ ಕುಳಿತು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಅವರು ನಿನ್ನೆ ಬೆಂಗಳೂರಿಗೆ ಆಗಮಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
Previous Articleಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ
Next Article ಹೀಗೂ ಒಂದು ಕ್ಯಾಲೆಂಡರ್