ದಾವಣಗೆರೆ,ಫೆ.6-
ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ನಿಲ್ಲುತ್ತಲೇ ಇಲ್ಲ. ಜೈಲು ಶಿಕ್ಷೆ ದಂಡ ಮೊದಲಾದ ಸರ್ಕಾರದ ಕಾನೂನಿನ ಬ್ರಹ್ಮಾಸ್ತ್ರಕ್ಕೂ ಈ ಸಂಸ್ಥೆಗಳು ಜಗ್ಗುತ್ತಲೆ ಇಲ್ಲ.
ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಬಾಕಿ ಉಳಿಸಿಕೊಂಡಿರುವ ಕೇವಲ 99 ರೂಪಾಯಿಗೆ 58 ಸಾವಿರ ರೂಪಾಯಿ ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆಯಲ್ಲಿ ಚಂದ್ರಶೇಖರ್ ಎಂಬ ಗ್ರಾಹಕರಿಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ.
ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಪ್ರತಿ ತಿಂಗಳು ನಿಯಮಿತವಾಗಿ ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಸೂಚಿಸಿದ್ದಾರೆ.
ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದರೆ ವಿವಿಧ ಶುಲ್ಕಗಳ ರೂಪದಲ್ಲಿ ವಿಧೀಸಲಾಗಿರುವ 58 ಸಾವಿರ ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ.
ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಚಂದ್ರಶೇಖರ್ ಸರ್ಕಾರದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಅಷ್ಟೇ ಅಲ್ಲದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.
Previous Articleರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
Next Article ಹೆಂಡತಿಯನ್ನು ಕೊಂದು ಕತೆ ಕಟ್ಟಿದ.