ಬೆಂಗಳೂರು,ಮಾ.12- ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಹಾಗೂ ರಾಗಿಣಿ ವಿರುದ್ಧದ ಎಫ್ಐಆರ್ ನ್ನು ರದ್ದುಪಡಿಸಿರುವ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಿಸಿಬಿ ಪೊಲೀಸರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾನ ಎಫ್ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿತ್ತು.
ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹೋಗಲು ಕಾನೂನು ಇಲಾಖೆ ಅಸ್ತು ಎಂದಿತ್ತು.
ಆ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಮೊರೆ ಹೋಗಿದೆ.