Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮರ್ಯಾದೆ ಗೇಡು ಹತ್ಯೆ ಪತ್ತೆ
    Viral

    ಮರ್ಯಾದೆ ಗೇಡು ಹತ್ಯೆ ಪತ್ತೆ

    vartha chakraBy vartha chakraApril 29, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಯಚೂರು,ಏ.29-
    ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ  ಲಿಂಗಸುಗೂರು ತಾಲೂಕಿನ ಹಂಚಿನಾಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
    ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಆರೋಪಿಯೇ ನ್ಯಾಯಾಲಯದಲ್ಲಿ ಸತ್ಯ ವಿಚಾರ ತಿಳಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
    ಕಳೆದ 2024ರ ಸೆಪ್ಟೆಂಬರ್ 29ರಂದು ಪುತ್ರಿ ರೇಣುಕಾಳನ್ನು (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ ಶವವನ್ನು ಮೂಟೆಕಟ್ಟಿ ಕೃಷ್ಣಾ ನದಿಗೆ ಎಸೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ರೇಣುಕಾ ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಗ್ರಾಮ ಬಿಟ್ಟು ಓಡಿಹೋಗಿದ್ದರು.
    ಆಗ ರೇಣುಕಾಗೆ 17 ವರ್ಷ ವಯಸ್ಸಾಗಿತ್ತು. ಮಗಳು ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು.
    ಅದರಂತೆ, ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.
    ಪೋಕ್ಸೋ ಪ್ರಕರಣದಡಿ ಪೊಲೀಸರು ಹನುಮಂತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ರೇಣುಕಾ ಮಾತ್ರ ಹನುಮಂತನನ್ನೇ ಮದುವೆ ಆಗುತ್ತೇನೆಂದು ಪಟ್ಟು ಹಿಡಿದಿದ್ದಳು. ಇದಾದ ಕೆಲವು ದಿನಗಳ ನಂತರ ಹನುಮಂತ ಜಾಮೀನು ಮೇಲೆ ಹೊರ ಬಂದಿದ್ದ. ಬಳಿಕ ಆತನ ಜೊತೆ ರೇಣುಕಾ ಓಡಾಟ ಆರಂಭಿಸಿದ್ದಳು. ಎಷ್ಟೇ ಬುದ್ಧಿ ಹೇಳಿದರೂ ಕೇಳದೆ, ಹನುಮಂತನನ್ನೇ ಮದುವೆ ಆಗುವೆ ಎಂದಿದ್ದಳು. ಇದರಿಂದ ಕೋಪಗೊಂಡು ಮಗಳನ್ನು ಕೊಲೆ ಮಾಡಿರುವುದಾಗಿ ತಂದೆ ಲಕ್ಕಪ್ಪ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.
    ಪೋಕ್ಸೋ ಪ್ರಕರಣದ ವಿಚಾರಣೆಗೆ ಹಲವು ಬಾರಿ ಪುತ್ರಿ ರೇಣುಕಾ ಗೈರಾದ ಬಗ್ಗೆ ಕೋರ್ಟ್ ಪ್ರಶ್ನೆ ಮಾಡಿತ್ತು. ಮಗಳನ್ನು ವಿಚಾರಣೆಗೆ ಹಾಜರುಪಡಿಸುವಂತೆ ಕೋರ್ಟ್ ತಾಕೀತು ಮಾಡಿತ್ತು. ಈ ವೇಳೆ ಲಕ್ಕಪ್ಪ ಅನಿವಾರ್ಯವಾಗಿ ತಪ್ಪೊಪ್ಪೊಕೊಳ್ಳಬೇಕಾಗಿ ಬಂತು.
    ಮಗಳನ್ನು ಕೊಲೆ ಮಾಡಿ ಮೂಟೆ ಕಟ್ಟಿ ನದಿಗೆ ಎಸೆದಿರುವುದಾಗಿ ಲಕ್ಕಪ್ಪ ಕೋರ್ಟ್ಗೆ ಹೇಳಿಕೆ ನೀಡಿದ್ದಾನೆ. ಇದರಿಂದಾಗಿ ಮರ್ಯಾದಾ ಹತ್ಯೆ ಪ್ರಕರಣವೊಂದು ಕೊನೆಗೂ ಬಯಲಾದಂತಾಗಿದೆ.

    Verbattle
    Verbattle
    Verbattle
    ಕೊಲೆ ನ್ಯಾಯ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    Next Article ವಿಶೇಷ ತನಿಖಾ ತಂಡ ರಚಿಸಲು ಸೂಚನೆ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • LeonardReawn on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • LeonardReawn on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.