ಬೆಂಗಳೂರು,ಮೇ.24-
ಮಧ್ಯಪಾನಪ್ರಿಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ.ರಾಜ್ಯ ಸರ್ಕಾರದ ನೂತನ ಮದ್ಯನೀತಿ ವಿರುದ್ಧ ಮದ್ಯ ಮಾರಾಟಗಾರರು ಸಿಡಿದೆದ್ದಿದ್ದಾರೆ.
ನಿರಂತರ ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ.
ಸರ್ಕಾರದ ಈ ನೀತಿ ವಿರೋಧಿಸಿ ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.
ಲೈಸೆನ್ಸ್ ದರ ಎಷ್ಟಿದೆ?
ಸಿಎಲ್ 9 ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62 ಲಕ್ಷ ಇರುವುದನ್ನು 15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸೆಸ್ 2,25 ಲಕ್ಷ ರೂ. ಸೇರಿ ಒಟ್ಟು ಒಟ್ಟು 17,25 ಲಕ್ಷ ರೂ. ಆಗಲಿದೆ.
ಸಿಎಲ್ 6ಎ ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75 ಲಕ್ಷ ಇದ್ದದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.
ಸಿಎಲ್ 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75 ಲಕ್ಷ ರೂ. ಇದ್ದದ್ದು ಈಗ 17 ಲಕ್ಷ ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.
26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ
Previous Articleವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
Next Article ಅವಧಿಗೆ ಮೊದಲೇ ಬಂತು ಮುಂಗಾರು.
