Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಜನ್ಮ ಜಾಲಾಡಿದ ಪ್ರಿಯಾಂಕ್ ಖರ್ಗೆ .
    ರಾಜಕೀಯ

    BJP ಜನ್ಮ ಜಾಲಾಡಿದ ಪ್ರಿಯಾಂಕ್ ಖರ್ಗೆ .

    vartha chakraBy vartha chakraMay 28, 202526 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ 27-
    ಜಲಜೀವನ್‌ ಮಿಷನ್‌ ಯೋಜನೆಯಡಿ ನಿಯಮ ಅನುಸಾರ ಕೇಂದ್ರದಿಂದ ರಾಜ್ಯಕ್ಕೆ 3 ಸಾವಿರ ಕೋಟಿ ರೂ.ಬದಲು 117 ಕೋಟಿ ರೂ. ಮಾತ್ರ ನೀಡಲಾಗಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 500 ಕೋಟಿ ರೂ.ಬಾಕಿ ಇದೆ‌
    ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ‌ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರಕ್ಕೆ ಹಣ ನೀಡುವಂತೆ ಕೋರಲಾಗಿದೆ.ಆದರೆ,
    ಸದ್ಯಕ್ಕೆ ನೀವೆ ಹಣ ಕೊಡಿ ಮುಂದಿನ ವರ್ಷ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
    ವಸ್ತುಸ್ಥಿತಿ ಹೀಗಿರುವಾಗ ಬಿಜೆಪಿಯವರು ದಿನ ಬೆಳಗಾದರೆ ಸುಳ್ಳು ಹೇಳಿಕೊಂಡೆ ರಾಜಕಾರಣ ಮಾಡುತ್ತಾರೆ. ಸತ್ಯ ಮರೆ ಮಾಚುತ್ತಾರೆ. ರಾಜ್ಯದ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆಯ ಬಗ್ಗೆ ದಿಕ್ಕು ತಪ್ಪಿಸುತ್ತಾರೆ ಎಂದು ಟೀಕಿಸಿದರು.
    ಗಂಗಾ ಕಲ್ಯಾಣ ಯೋಜನೆ, ಬೋವಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಯಾವ ಲೋಪವೂ ಆಗಿಲ್ಲ ಎಂದು ಆರಂಭದಲ್ಲಿ ವಾದಿಸಿದ್ದರು. ಈಗ ಬೋವಿ ನಿಗಮದ ಹಗರಣದಲ್ಲಿ ಆಸ್ತಿಗಳ ಜಪ್ತಿಯಾಗುತ್ತಿದೆ. ಬಿಜೆಪಿ ಯಾವ ವಿಷಯದಲ್ಲೂ ಸತ್ಯ ಹೇಳುವುದಿಲ್ಲ ಎಂದರು.
    ಸುಳ್ಳು ಹರಡುವುದರಲ್ಲಿ ಬಿಜೆಪಿಯವರು ಮಾಸ್ಟರ್‌ ಡಿಗ್ರಿ ಮಾಡಿದ್ದಾರೆ. ಕಾಂಗ್ರೆಸ್‌‍ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ಬಿಜೆಪಿಯಿಂದ ನೀಡಲಾಗಿರುವ ಜಾಹೀರಾತಿನಲ್ಲಿ ಸಾಕಷ್ಟು ತಪ್ಪು ಮಾಹಿತಿಗಳಿವೆ. ಸರ್ಕಾರದ ಯೋಜನೆಗಳನ್ನು ಅಂಕಿ ಸಂಖ್ಯೆ ಸಹಿತ ಟೀಕೆ ಮಾಡಲಿ. ಆದರೆ ಸುಳ್ಳು ಮಾಹಿತಿ ನೀಡಿದರೆ ಹೇಗೆ ಎಂದು ಪ್ರಶ್ನಿಸಿದರು.
    ಸುಳ್ಳು ಸುದ್ದಿ ಹರಡುವುದಕ್ಕೆ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ. ಬಿಜೆಪಿಯ ಐಟಿ ಸೆಲ್‌ ನಿರಂತರವಾಗಿ ಸುಳ್ಳು ಮಾಹಿತಿ ಹರಡುತ್ತಿದೆ. ಆಪರೇಷನ್‌ ಸಿಂಧೂರ್‌ ಬಗ್ಗೆಯೂ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಲಾಯಿತು. ಇವರೆಲ್ಲಾ ಹಿಟ್ಲರ್‌ ವಂಶದ ಸನಾತನಿಗಳು ಎಂದು ಪ್ರಿಯಾಂಕ್‌ ಟೀಕೆ ಮಾಡಿದರು.
    ಮಾನನಷ್ಟ ಮೊಕದ್ದಮೆ ದಾಖಲಿಸುವ ವಿರುದ್ಧ ಬಿಜೆಪಿ ಕೋರ್ಟ್‌ಗೆ ಹೋಗಲಿ. ನಾವು ಸುಳ್ಳಿನ ವಿರುದ್ಧ ಹೋರಾಟ ಮಾಡುತ್ತೇವೆ. ಕೋವಿಡ್‌ ಹಗರಣದ ಕುರಿತು ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ಸಮಿತಿ ವರದಿ ನೀಡಿದೆ. ಬಿಜೆಪಿ ಸರ್ಕಾರದಲ್ಲಿ ಶೇ. 40ರಷ್ಟು ಕಮಿಷನ್‌ ಹಗರಣವಾಗಿತ್ತು. ಕಾಂಗ್ರೆಸ್‌‍ ಪುರಾವೆಗಳೊಂದಿಗೆ ಹೋರಾಟ ನಡೆಸಿತ್ತು. ನಾವು ಯಾವುದೇ ಸುಳ್ಳು ಆರೋಪಗಳನ್ನು ಮಾಡಿರಲಿಲ್ಲ ಎಂದರು.
    ಸರ್ಕಾರದಲ್ಲಿ ಸುಳ್ಳಿಗೆ ಕಡಿವಾಣ ಹಾಕಲಾಗುತ್ತದೆ. ಅದಕ್ಕೆ ಬೇಕಾದ ಕಾನೂನನ್ನು ರೂಪಿಸಲಾಗುವುದು. ಇನ್ನೂ ಮುಂದೆ ಬಿಜೆಪಿಯವರಿಗೆ ಸುಳ್ಳು ಹೇಳಲು ಸಾಧ್ಯವಾಗುವುದಿಲ್ಲ. ಕಾನೂನು ದುರುಪಯೋಗವಾಗದಂತೆ ಎಚ್ಚರಿಕೆಯನ್ನೂ ವಹಿಸುತ್ತೇವೆ ಎಂದು ಹೇಳಿದರು.
    ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಹೇಳಿದ್ದಾರೆ. ಕೇಂದ್ರ ಅಥವಾ ಬಿಜೆಪಿ ಸರ್ಕಾರದಲ್ಲಿ ಎಷ್ಟು ಜನ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಅವರ ಬಳಿ ಇಲ್ಲವೇ? ಕಲಬುರಗಿ ಜಿಲ್ಲಾಧಿಕಾರಿ ಘಾಸಿಯಾ ತಬರಮ್‌ ರನ್ನು ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಮಾಡಿರುವ ಟೀಕೆ ಮನುಸ್ಮೃತಿಯ ಪ್ರತೀಕ ಎಂದು ವಾಗ್ದಾಳಿ ನಡೆಸಿದರು.
    ಘಾಸಿಯಾ ತಬರಮ್‌ ಬಡತನದಲ್ಲಿ ಹುಟ್ಟಿ ಕಷ್ಟ ಪಟ್ಟು ಓದಿ ಐಎಎಸ್‌‍ ಅಧಿಕಾರಿಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪಾಕಿಸ್ತಾನದಿಂದ ಬಂದಿದ್ದಾರಾ ಎಂದು ರವಿ ಕುಮಾರ್‌ ಪ್ರಶ್ನೆ ಮಾಡಿದ್ದಾರೆ. ನಂತರ ಕ್ಷಮೆಯನ್ನೂ ಕೇಳಿದ್ದಾರೆ.ಇವರು ಮನುಸತಿ ಮನಸ್ಥಿತಿಯವರು. ಆರ್‌ ಎಸ್‌‍ ಎಸ್‌‍ ಗರಡಿಯಲ್ಲಿ ಬೆಳೆದಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರಿಗೆ ಅವಕಾಶ ಇದ್ಯಾ. ಹಾಗಾಗಿ ಟೀಕೆ ಮಾಡುತ್ತಾರೆ ಎಂದು ವಿಶ್ಲೇಷಿಸಿದರು

    Verbattle
    Verbattle
    Verbattle
    BJP ಕಾಂಗ್ರೆಸ್ ಕಾನೂನು ನ್ಯಾಯ ಬಿಜೆಪಿ Bengaluru ಮೈ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾರ್, ಸೋಮಶೇಖರ್ ಗೆ ಬಿಜೆಪಿ ಗೇಟ್ ಪಾಸ್.
    Next Article ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts on ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    • Daviddek on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Alfredsnuts on 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.