Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತಕ್ಕೆ ಪ್ರತಾಪ್ ಸಿಂಹ ಕೊಟ್ಟ ಕಾರಣ ಕೇಳಿ.
    ರಾಜಕೀಯ

    ಕಾಲ್ತುಳಿತಕ್ಕೆ ಪ್ರತಾಪ್ ಸಿಂಹ ಕೊಟ್ಟ ಕಾರಣ ಕೇಳಿ.

    vartha chakraBy vartha chakraJune 6, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಐಪಿಎಲ್ ಕಪ್ ಗೆದ್ದ ಆರ್ ಸಿ ಬಿ ಕ್ರಿಕೆಟ್ ತಂಡಕ್ಕೆ
    ವಿಧಾನಸೌಧದ ಮುಂದೆ ಏರ್ಪಡಿಸಿದ್ದು ಸನ್ಮಾನ ಸಮಾರಂಭ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೊಮ್ಮಕ್ಕಳಿಗೆ ಆಟಗಾರರಿಂದ ಆಟೋಗ್ರಾಫ್ ಕೊಡಿಸಲು ಏರ್ಪಡಿಸಿದ್ದ ಕಾರ್ಯಕ್ರಮ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಒರಟು ವ್ಯಕ್ತಿ ಅಂದುಕೊಂಡಿದ್ದೆ, ಅವರು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುದು ಗೊತ್ತಾಯಿತು ಎಂದು ಕಿಡಿಕಾರಿದರು.
    ಅವರೊಬ್ಬ ನಿರ್ಭಾವುಕ, ನಿರ್ಲಜ್ಜ ವ್ಯಕ್ತಿ. ಮುಖ್ಯಮಂತ್ರಿಯ ಮೊಮ್ಮಗ, ಸಚಿವರು, ಅಧಿಕಾರಿಗಳ ಮಕ್ಕಳು ಆರ್‌ಸಿಬಿ ತಂಡದವರೊಂದಿಗೆ ಫೋಟೊಗ್ರಾಫ್‌-ಆಟೊಗ್ರಾಫ್‌ ತೆಗೆದುಕೊಳ್ಳಲೆಂದು ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಸಲಾಯಿತು’ ಎಂದು ದೂರಿದರು.
    ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿಮಗಳು, ಸಿದ್ದರಾಮಯ್ಯ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಆಂಧ್ರಪ್ರದೇಶದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದರು. ಈಗ ಇಲ್ಲಿ ಮುಖ್ಯಮಂತ್ರಿ ಅರೆಸ್ಟ್ ಆಗುತ್ತಾರಾ, ಡಿಸಿಎಂ ಅರೆಸ್ಟ್ ಆಗುತ್ತಾರಾ? ಗೃಹ ಸಚಿವರ ತಲೆದಂಡ ಆಗುತ್ತಾ? ಈ ಘಟನೆಗೆ ಯಾರು ಹೊಣೆ ಹೇಳಿ’ ಎಂದು ಪ್ರಶ್ನಿಸಿದರು.
    ತಿಪ್ಪೆ ಸಾರಿಸಲು ತನಿಖೆಗೆ ಆದೇಶಿಸಲಾಗಿದೆ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಕಳಂಕ‌ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ’ ಎಂದು ದೂರಿದರು
    ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರಿಗೆ ಭದ್ರತೆಯ ಪಾಠ ಮಾಡಿದ್ದ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್‌ ಖರ್ಗೆ ಈಗ ಎಲ್ಲಿ ಹೋದರು? ಆದಿತ್ಯನಾಥ್ ಅವರು ಕೋಟ್ಯಂತರ ಜನರು ಬಂದರೂ ಕುಂಭಮೇಳವನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದವರು 60ಸಾವಿರ ಜನರನ್ನು ನಿಭಾಯಿಸುವುದಕ್ಕೂ ಆಗಲಿಲ್ಲ. ಕಾಂಗ್ರೆಸ್‌ಗೆ ಎಷ್ಟು ದರಿದ್ರ ಬಂದಿದೆ ಎಂದರೆ, ಆರ್‌ಸಿಬಿ ಗೆಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು’ ಎಂದು ಆರೋಪಿಸಿದರು.
    ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆರ್‌ಸಿಬಿ ತಂಡದೊಂದಿಗೆ ಶಾಲು, ಕೂಲಿಂಗ್‌ ಗ್ಲಾಸ್ ಹಾಕಿಕೊಂಡು ಪೋಸು ಕೊಟ್ಟಿದ್ದೇ ಕೊಟ್ಟಿದ್ದು. ಅದನ್ನು ಬಿಟ್ಟು ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೇ ಬಂದ್‌ ಬಿಡ್ತಿನಿ ಕಾರ್ಯಕ್ರಮ ಮಾಡಿ ಅಂದಿದ್ರಾ? ಫೈನಲ್‌ ಮರು ದಿನವೇ ಕಾರ್ಯಕ್ರಮ ನಡೆಸುವ ಒತ್ತಡವೇನಿತ್ತು? ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರ್ಕಾರಕ್ಕೆ ಕನಿಷ್ಠ ಸಾಮಾನ್ಯ ಜ್ಞಾನ ಇದ್ದಿದ್ದರೆ ಕಾಲ್ತುಳಿತದಂತಹ ಘಟನೆ ನಡೆಯುತ್ತಿರಲಿಲ್ಲ’ ಎಂದು ವಾಗ್ದಾಳಿ ನಡೆಸಿದರು

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಆಲಮಟ್ಟಿ ತಗಾದೆಗೆ‌ ಸಿಕ್ಕಿದ ಉತ್ತರ.
    Next Article ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.