Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿವಾರು ಗಣತಿ ಹೊಸ ಸಮೀಕ್ಷೆಗೆ ನಿರ್ಧಾರ.
    ರಾಜಕೀಯ

    ಜಾತಿವಾರು ಗಣತಿ ಹೊಸ ಸಮೀಕ್ಷೆಗೆ ನಿರ್ಧಾರ.

    vartha chakraBy vartha chakraJune 12, 20251 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12:
    ರಾಜ್ಯ ರಾಜಕಾರಣದಲ್ಲಿ ಬಾರಿ ಕೋಲಾಹಲಕ್ಕೆ ಕಾರಣವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿವಾರು ಜನಗಣತಿ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.
    ರಾಜ್ಯದ ಪ್ರಭಾವಿ ಸಮುದಾಯಗಳ ಒತ್ತಡಕ್ಕೆ ಮಣಿದ ಹೈಕಮಾಂಡ್ ನೀಡಿದ ಸೂಚನೆ ಆಧರಿಸಿ ರಾಜ್ಯ ಸರ್ಕಾರ ಇದೀಗ ಹೊಸ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ.
    ಈ ಹಿಂದೆ ಸಮೀಕ್ಷೆ ನಡೆಸಿದ ಕಾಂತರಾಜು ನೇತೃತ್ವದ ಆಯೋಗದ ವರದಿಯ ದತ್ತಾಂಶಗಳನ್ನು ಆದರಿಸಿ, ಜಯಪ್ರಕಾಶ್ ಹೆಗಡೆ ನೇತೃತ್ವದ ಹಾಯೋಗ ನೀಡಿದ್ದ ವರದಿ ಅನುಷ್ಠಾನ ಕುರಿತಂತೆ ಚರ್ಚಿಸಲು ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ
    ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಕಾಯಿದೆಯ ಅನುಸಾರ ಪ್ರತಿ 10 ವರ್ಷಗಳಿಗೊಮ್ಮೆ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕು ಅದರಂತೆ ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ಹೊಸದಾಗಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
    ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ,ಕಳೆದ 2015 ರಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ಕೈಗೊಂಡು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿತ್ತು. ಅದರ ದತ್ತಾಂಶಗಳನ್ನು ಆಧರಿಸಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಕಳೆದ ಫೆಬ್ರವರಿ 2024ರಲ್ಲಿ ವರದಿ ನೀಡಿತ್ತು. ಆದರೆ ಆ ಲೋಕಸಭಾ ಚುನಾವಣೆಗಳು ಘೋಷಣೆಯಾದ ಹಿನ್ನೆಲೆಯಲ್ಲಿ ವರದಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಲಿಲ್ಲ ಈಗ ಈ ವರದಿ ಸಲ್ಲಿಸಿ ಹತ್ತು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ವಿವರಿಸಿದರು.
    2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನರಿದ್ದರು. ಈ ಜನಸಂಖ್ಯೆ 2015 ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನರು ಸಮೀಕ್ಷೆಗೆ ಒಳಪಟ್ಟಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದ್ದು 11.4.2015 ರಂದು ಹಾಗೂ 30-5-2015 ರಂದು ಮುಕ್ತಾಯವಾಗಿದೆ. 1.60 ಲಕ್ಷ ಸಿಬ್ಬಂದಿ ಹಾಗೂ 1.33 ಲಕ್ಷ ಉಪಾಧ್ಯಾಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು.
    ಹಿಂದೆ 2013-2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮಗೊಂಡಿರಲಿಲ್ಲ. 2018 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದರು. ಪುಟ್ಟರಂಗಶೆಟ್ಟರು ಅವರು ಹಿಂದುಳಿದ ವರ್ಗಗಳ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು. ಅಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜು ಹಾಗೂ ಸದಸ್ಯರು ಸಚಿವ ಪುಟ್ಟರಂಗಶೆಟ್ಟರನ್ನು ಭೇಟಿ ಮಾಡಿ ವರದಿ ಪಡೆಯಬೇಕು ಎಂದು ಕೋರಿದಾಗ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಒತ್ತಡ ಹಾಕಿ ವರದಿಯನ್ನು ಪಡೆಯಬಾರದು ಎಂದದ್ದರಿಂದ ಅವರು ವರದಿ ಪಡೆಯಲಿಲ್ಲ. ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಕೂಡ ಬಿಜೆಪಿಯವರೇ ಆಗಿದ್ದರು. ಜಯಪ್ರಕಾಶ್ ಹೆಗಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಶಿಫಾರಸ್ಸು ಮಾಡಿದರು. ಶಿಫಾರಸ್ಸುಗಳನ್ನು 29-2-2024 ರಂದು ಸರ್ಕಾರಕ್ಕೆ ಸಲ್ಲಿಸಿದರು. ಕಾಂತರಾಜು ಅವರು ಕೂಡ ಈ ಸಂದರ್ಭದಲ್ಲಿ ಇದ್ದರು ಎಂದು ತಿಳಿಸಿದರು.
    ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿಯ ಬಗ್ಗೆ ಚರ್ಚೆ ಮಾಡಲಾಗಲಿಲ್ಲ. ನಂತರ ನಮ್ಮ ಸರ್ಕಾರ ವರದಿಯನ್ನು ಪಡೆದು 2025 ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವ ಸಂಪುಟದಲ್ಲಿ ಮಂತ್ರಿ ಮಂಡಲದ ಸದಸ್ಯರು ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚೆ ಮಾಡಿದೆ ಎಂದರು.
    ಪಕ್ಷದ ವರಿಷ್ಠರು ನನ್ನನ್ನು ಮತ್ತು ಉಪಮುಖ್ಯಮಂತ್ರಿಗಳನ್ನು ಕರೆದು ವರದಿ ಹತ್ತು ವರ್ಷಗಳಷ್ಟು ಹಳೆಯದಾಗಿದ್ದು, ಕಾನೂನು ಪ್ರಕಾರ ಅನೇಕ ಬದಲಾವಣೆಗಳು ಮತ್ತು ಬೆಳವಣಿಗೆಗಳು ಆಗಿರುತ್ತವೆ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಿದ್ದುಪಡಿ ವಿಧೇಯಕ (2014) ಸೆಕ್ಷನ್ 11 ಕಲಂ (1) ರಂತೆ ರಾಜ್ಯ ಸರ್ಕಾರವು ಯಾವುದೇ ಸಮಯದಲ್ಲಿ ಈ ಅಧಿನಿಯಮ ಜಾರಿಗೆ ಬಂದ ದಿನಾಂಕದಿಂದ 10 ವರ್ಷಗಳ ಅವಧಿ ಮುಕ್ತಾಯವಾದಾಗ, ಮತ್ತು ಅದರ ನಂತರ ಬರುವ ಪ್ರತಿ 10 ವರ್ಷಗಳು ಮುಕ್ತಾಯವಾಗುವಾಗ ಹಿಂದುಳಿದ ವರ್ಗವಾಗಿ ಉಳಿಯದೇ ಹೋಗಿರುವ ವರ್ಗಗಳನ್ನು ಪಟ್ಟಿಯನ್ನು ತೆಗೆದುಹಾಕುವುದು ಅಥವಾ ಹೊಸ ಹಿಂದುಳಿದ ವರ್ಗಗಳನ್ನು ಪಟ್ಟಿಗೆ ಸೇರಿಸುವದು ಎಂದು ಸ್ಪಷ್ಟವಾಗಿದೆ ಹೇಳಿದೆ. ಕಲಂ 2 ರಲ್ಲಿ ಹೇಳಿದಂತೆ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯಕ್ ಅವರ ಸಲಹೆಯನ್ನೂ ಪಡೆಯಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    Verbattle
    Verbattle
    Verbattle
    ಕರ್ನಾಟಕ ಕಾನೂನು Election ಬಿಜೆಪಿ Bengaluru ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    Next Article RCB ಪದಾಧಿಕಾರಿಗಳಿಗೆ ಜಾಮೀನು.
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    1 Comment

    1. Everetttup on February 13, 2026 11:05 pm

      Апартаменты с барной стойкой и пивным краном (кег заказывается отдельно). Настоящее разливное пиво дома. Пенное вечеринка. Бокалы, тара для еды. Смотрите футбол с холодным лагером. Мужской рай. Квартира на сутки для настоящих фанатов. квартира на сутки молодечно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tvrcmz on ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.
    • MichaelRem on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Edwardwromi on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.