ಬೆಂಗಳೂರು,ಜು.4:
ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ ಎಷ್ಟು ಜನ ಮಕ್ಕಳು ಅವರು ಏನು ಮಾಡುತ್ತಿದ್ದಾರೆ ಹೀಗೊಂದು ಪ್ರಶ್ನೆ ಕಳೆದ ನಾಲ್ಕೈದು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇದಕ್ಕೆ ಪ್ರಮುಖ ಕಾರಣ ಕೆಲವು ಮಾಧ್ಯಮಗಳಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂಬ ಸುದ್ದಿ ಪ್ರಕಟವಾಗುತ್ತಿದೆ.
ವಾಸ್ತವವಾಗಿ ಇದು ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಶ್ರೇಣಿಯ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ಅವರ ಕುರಿತಾದ ಸುದ್ದಿ.
ಅವರು ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.
ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಕೆಎಎಸ್ ಅಧಿಕಾರಿಯಾಗಿರುವ ಅಪೂರ್ವ ಬಿದರಿ ಅವರು ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ .
ಅಪೂರ್ವ ಬಿದರಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿ ಅಲ್ಲ. ಆದರೆ ಕೆಲವು ಮಾಧ್ಯಮಗಳಲ್ಲಿ ಅಪೂರ್ವ ಬಿದರಿ ಶಂಕರ್ ಬಿದರಿ ಅವರ ಮಗಳು ಎಂದು ಉಲ್ಲೇಖಿಸಲಾಗಿದೆ.
ಶಂಕರ್ ಬಿದರಿ ಅವರಿಗೆ ಇಬ್ಬರು ಮಕ್ಕಳು ಒಂದು ಗಂಡು ಒಂದು ಹೆಣ್ಣು ಒಬ್ಬ ಮಗಳು ವಿಜಯಲಕ್ಷ್ಮಿ ಬಿದರಿ ಇವರು ಮಹಾರಾಷ್ಟ್ರ ಕೇಡರ್ ನ ಐಎಎಸ್ ಅಧಿಕಾರಿ.
ಮಹಾರಾಷ್ಟ್ರ ಆಡಳಿತ ಸೇವೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ನಾಗಪುರ ವಲಯದ ವಿಭಾಗಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತೊಬ್ಬ ಪುತ್ರ ಐಪಿಎಸ್ ಅಧಿಕಾರಿ ವಿಜಯೇಂದ್ರ ಬಿದರಿ.
ಹೀಗಾಗಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ಇವರ ಮಗಳಲ್ಲ.