Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?
    ಸುದ್ದಿ

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    vartha chakraBy vartha chakraJuly 26, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Farmers cast urea fertilizer in a rice plantation on the expropriated and now redistributed farm of El Charcote in the central state of Cojedes October 14, 2010. El Charcote became a symbol of Chavez's socialist revolution when he sent soldiers to seize it in a 2005 push to break up major ranches and repopulate rural areas largely abandoned since Venezuela's oil industry took off in the 1920s. The government recently bought the last 500,000 acres (200,000 hectares) of land on the farm, a vast cattle ranch that until 2005 belonged to one of Britain's wealthiest families, the Vesteys, and 130,000 cattle, part of a new drive by Chavez to increase state control of food in South America's top oil producer. Picture taken October 14, 2010. REUTERS/Carlos Garcia Rawlins (VENEZUELA - Tags: POLITICS ENVIRONMENT AGRICULTURE)
    Share
    Facebook Twitter LinkedIn Pinterest Email WhatsApp

    ಬೆಂಗಳೂರು,
    ರಾಜ್ಯದಲ್ಲೆಡೆ ಉತ್ತಮ ಮಳೆಯಾಗಿದ್ರು ಕೃಷಿ ಚಟುವಟಿಕೆಗಳು ಸುರುಕಿನಿಂದ ಆರಂಭಗೊಂಡಿದೆ ಈ ನಡುವೆ ಕೆಲವು ಕಡೆ ರಸಗೊಬ್ಬರ ಅಭಾವವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಖುಷಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ತಿಳಿಸಿದರು.
    ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
    ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಇಂತಹ ಗೊಂದಲ ಉಂಟಾಗಿದೆ ಎಂದು ಹೇಳಿದರು
    ಈ ಬಾರಿ ಸುಮಾರು 2 ಲಕ್ಷ ಹೆಕ್ಟೇರ್ ಮುಸಿಕನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್ – ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿಸಲು ಮುಂದಾಗಿದ್ದು ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟರು.
    ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ತಿಂಗಳ ಬೇಡಿಕೆಯಂತೆ‌ ವಿತರಣೆಯ ನಂತರವೂ ದಾಸ್ತಾನು ಉಳಿಕೆ ಇದೆ ಒಂದು ವೇಳೆ ಕೆಲವು ನಿರ್ಧಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು, ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
    ರಾಜ್ಯದಲ್ಲಿ 3,46,499 ಹಳೆ ಯೂರಿಯಾ ದಾಸ್ತಾನು ಉಳಿಕೆ ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿದಂತೆ 8,73,315 ಮೆಟ್ರಿಕ್ ಟನ್ ಒಟ್ಟು ಲಭ್ಯತೆ ಇತ್ತು, ಇದರಲ್ಲಿ 7,08,859 ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ. ಇನ್ನು 1,64,56 ಮೆಟ್ರಕ್ ಟನ್ ಯೂರಿಯ ದಾಸ್ತಾನು ಉಳಿಕೆಯಿದೆ. ಅಲ್ಲದೆ ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು.
    ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೋ ಯೂರಿಯಾ ಕೂಡ ಲಭ್ಯವಿದ್ದು ಇದು ಸಹ ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ರೈತರು ನಡೆಸಿದ ಪ್ರಯೋಗಗಳ ಸಾಭೀತಾಗಿದ್ದು. ಉಳಿತಾಯ ಕೂಡ ಆಗಲಿದೆ. ಆದ್ದರಿಂದ ಕೃಷಿಕರು ಈ ಬಗ್ಗೆಯೂ ಗಮನಹರಿಸಬೇಕೆಂದು ಹೇಳಿದರು.
    ಅತಿಯಾದ ರಸಗೊಬ್ಬರ ಬಳಕೆ ಭೂಮಿಯ ಫಲವತ್ತತೆ ಹಾಗೂ ಮಾನವನ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದ್ದು, ಮುಂದಿನ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರಗಳ ಬಳಕೆ ಹಸಿರು ಗೊಬ್ಬರ, ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವುದು ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.

    ಆರೋಗ್ಯ Bengaluru ವಿದ್ಯಾ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleFIR ದಾಖಲಿಸಲು ಇದು ಕಡ್ಡಾಯ !
    Next Article CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Briancaugs on ನೇಕಾರ ಅಭಿವೃದ್ಧಿ ನಿಗಮ ಬೇಕು
    • Jamesfluts on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe