ಬೆಳಗಾವಿ,
ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ ಇದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ ಚನ್ನರಾಜ ಹಟ್ಟಿ ಹೊಳಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.
ತೆಲಂಗಾಣ ಸರ್ಕಾರ ಹೈದರಾಬಾದ್ ನಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಡಿಕೆ ಶಿವಕುಮಾರ್ ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದರು ಬೆಂಗಳೂರಿನಿಂದ ಇಂದು ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂತ್ರಿ ಹೆಬ್ಬಾಳ್ಕರ್ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಳಗಾವಿಯ ಇತರೆ ಕಾಂಗ್ರೆಸ್ ಶಾಸಕರೊಂದಿಗೆ ಸ್ವಾಗತಿಸಿದರು.
ಈ ಫೋಟೋ ಅನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಾಕಿಕೊಂಡಿರುವ ಚನ್ನರಾಜ ಹಟ್ಟಿಹೊಳಿ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು ಎಂದು ಅದರಲ್ಲಿ ಹೇಳಿಕೊಂಡಿದ್ದಾರೆ.
ಈ ಪೋಸ್ಟ್ ಇದೀಗ ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದೆ.
ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?
Previous Articleಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ
Next Article ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

