ಬೆಂಗಳೂರು,
ಕಳೆದ ಕೆಲವು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಕೇವಲ ಆಡಳಿತಾಧಿಕಾರಿಗಳ ನಿರ್ವಹಣೆಯಲ್ಲಿ ನಡೆಯುತ್ತಿರುವ ಬೆಂಗಳೂರು ಮಹಾನಗರ ಪಾಲಿಕೆಗೆ ಬರುವ ಜೂನ್ 30ರೊಳಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ನೂತನ ಕಾಯಿದೆ ಅನ್ವಯ ರಚನೆ ಆಗಿರುವ ಗ್ರೇಟರ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಬರುವ ಜೂನ್ 30ರ ಒಳಗೆ ಚುನಾವಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಾಲ್ಯ ಬಾಗ್ಚಿ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾಯ ಪೀಠದ ಮುಂದೆ ಹಾಜರಾಗಿದ್ದ ರಾಜ್ಯ ಸರ್ಕಾರದ ಪರ ವಕೀಲರು ಸುದೀರ್ಘ ಮೆಮೊ ಸಲ್ಲಿಸಿದ್ದರು ರಾಜ್ಯ ಸರ್ಕಾರ ಆಡಳಿತದಲ್ಲಿ ಸುಧಾರಣೆ ತರುವ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಎಂದು ಬದಲಾಯಿಸಿದೆ ಇದರ ವ್ಯಾಪ್ತಿಯಲ್ಲಿ ಐದು ಮಹಾನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದೆ ಇವುಗಳಿಗೆ ಚುನಾವಣೆ ನಡೆಸುವ ಸಂಬಂಧ ಪ್ರಕ್ರಿಯೆಗಳು ಆರಂಭಗೊಂಡಿವೆ.
ವಾರ್ಡ್ ವಾರು ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಆರಂಭವಾಗಿದ್ದು ಈ ಪಟ್ಟಿಯನ್ನು ಸಲ್ಲಿಸಲು ಫೆಬ್ರವರಿ 20 ರವರೆಗೆ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯ ಪೀಠ ಫೆಬ್ರವರಿ 20ರೊಳಗಾಗಿ ಐದು ಮಹಾನಗರ ಪಾಲಿಕೆಗಳ ವಾರ್ಡ್ ವಾರು ಮೀಸಲಾತಿಯ ಅಂತಿಮ ಪಟ್ಟಿಯನ್ನು ಪ್ರಕಟಿಸಬೇಕು. ಎಂದು ಸೂಚಿಸಿತು ಅಲ್ಲದೆ ಬರುವ ಜೂನ್ 30ರೊಳಗಾಗಿ ಚುನಾವಣೆ ಮುಗಿಸಬೇಕು ಎಂದು ಆದೇಶಿಸಿತು. ಇದಕ್ಕೆ ಅಲ್ಲಿಯೇ ಪ್ರತಿಕ್ರಿಯೆ ನೀಡಿದ ಚುನಾವಣಾ ಆಯೋಗದ ಪರ ವಕೀಲರು ಈಗಾಗಲೇ ಐದು ವಾರ್ಡ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸ ನಡೆಯುತ್ತಿದೆ ಮಾರ್ಚ್ 16 ರೊಳಗೆ ಇದು ಪೂರ್ಣಗೊಳ್ಳಲಿದ್ದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಇದೇ ಅವಧಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಹೀಗಾಗಿ ಚುನಾವಣೆ ನಡೆಸಲು ಕಷ್ಟವಾಗುತ್ತದೆ ಆದ್ದರಿಂದ ಜೂನ್ 30ರ ಒಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು ಇದಕ್ಕೆ ನ್ಯಾಯ ಪೀಠ ಸಮ್ಮತಿ ವ್ಯಕ್ತಪಡಿಸಿತು
Previous Articleವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!
Next Article ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

