ಬೆಂಗಳೂರು,
ಸಜಾ ಬಂದಿಗಳಿಗೆ ಮತ್ತು ವಿಚಾರಣಾಧೀನ ಕೈದಿಗಳಿಗೆ ಐಷಾರಾಮಿ ಸೌಲಭ್ಯ ಕಲ್ಪಿಸುವ ಕುರಿತಂತೆ ದೊಡ್ಡ ವಿವಾದ ಸೃಷ್ಟಿಸಿರುವ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಜ.7ರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳು ಹಲ್ಲೆ ನಡೆಸಿದ್ದಾರೆ. ಕೈದಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ಅನವಶ್ಯಕವಾಗಿ ಸಜಾಬಂಧಿ ಕಚೇರಿಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಅವರನ್ನು ತಡೆಯಲು ಮುಂದಾದ ಅಸಿಸ್ಟೆಂಟ್ ಜೈಲರ್ ಹಾಗೂ ಜೈಲು ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ನಂತರ ಕರ್ತವ್ಯ ನಿರ್ವಹಣೆಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರಭಾರ ಅಧೀಕ್ಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ತಿಂಗಳ ಹಿಂದೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನೃತ್ಯ ಮಾಡುತ್ತಿರುವುದು ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಹಲ್ ಚಲ್ ಎಬ್ಬಿಸಿದ್ದವು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
Previous Articleಮೈಸೂರು ಜೆಡಿಎಸ್ ನಲ್ಲಿ ತಲ್ಲಣ
Next Article AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

