Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!
    ರಾಜಕೀಯ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    vartha chakraBy vartha chakraFebruary 25, 2026No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ನಡುವೆ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಕೂಡ ಇದ್ದೇನೆ ಎಂದು ಗೃಹ ಮಂತ್ರಿ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ.
    ಪರಮೇಶ್ವರ್ ಅವರ ಈ ಹೇಳಿಕೆಯ ಮೂಲಕ ವಿದ್ಯಮಾನಗಳಿಗೆ ಕುತೂಹಲಕರ ತಿರುವು ಸಿಕ್ಕಿದೆ. ಸುದೀರ್ಘ ಅವಧಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ ಹೀಗಾಗಿ ಮುಖ್ಯಮಂತ್ರಿ ಹುದ್ದೆಗೆ ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಅವರು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ ಕುರಿತಾಗಲಿ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್‌ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
    ಯಾರಾದರೂ ನನ್ನ ಹೆಸರನ್ನು ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನನ್ನ ಸಾಮರ್ಥ್ಯವನ್ನು ಎಷ್ಟು ಬಾರಿ ಸಾಬೀತುಪಡಿಸಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಎಂಟು ವರ್ಷ ಕೆಲಸ ಮಾಡಿದ್ದೇನೆ. ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಸಾಮರ್ಥ್ಯ ಇಲ್ಲದೆ ಇದ್ದರೆ ಉಪಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೆ. ನನ್ನ ಸಾಮರ್ಥ್ಯದ ಬಗ್ಗೆ ಯಾರು ಪ್ರಶ್ನೆ ಮಾಡುವಂತಿಲ್ಲ. ಹಲವಾರು ಬಾರಿ ನಾನು ಅದನ್ನು ಸಾಬೀತುಪಡಿಸಿದ್ದೇನೆ. ಆದರೆ ಸನ್ನಿವೇಶ ಮತ್ತು ಪಕ್ಷದ ತೀರ್ಮಾನ ಎಲ್ಲವನ್ನೂ ಆಧರಿಸಿರುತ್ತದೆ ಎಂದು ವಿಶ್ಲೇಷಿಸಿದರು.
    ಇದರ ಹೊರತಾಗಿ ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದೇನೆ. ಈ ವಿಚಾರವಾಗಿ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಯಾರೋ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಕೇವಲ ಈ ಬಗ್ಗೆ ಚರ್ಚೆ ಮಾಡಬಹುದಷ್ಟೇ ಎಂದು ಸ್ಪಷ್ಟಪಡಿಸಿದರು.
    ಇದೇ ವಿಚಾರಕ್ಕಾಗಿ ನಾನು ದೆಹಲಿಗೆ ಹೋಗಬೇಕಾದ ಅವಶ್ಯಕತೆ ಇಲ್ಲ ಶಿಕ್ಷಣ ಸಂಸ್ಥೆ ಮತ್ತು ವ್ಯವಹಾರಗಳನ್ನು ಹೊಂದಿರುವ ನಾನು ಹಲವಾರು ವಿಚಾರಗಳಿಗಾಗಿ ಆಗಿಂದಾಗ್ಗೆ ದೆಹಲಿಗೆ ಹೋಗುತ್ತಿರುತ್ತೇನೆ ಈ ವೇಳೆ ಹೈಕಮಾಂಡ್ ನ ಕೆಲವು ನಾಯಕರು ಕೂಡ ಭೇಟಿ ಮಾಡಿ ಚರ್ಚೆ ಮಾಡುತ್ತಿರುತ್ತೇನೆ ಇದರಲ್ಲಿ ವಿಶೇಷವೇನೂ ಇಲ್ಲ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ Bengaluru ವ್ಯವಹಾರ ಶಿಕ್ಷಣ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮಸೀದಿಯಾದ ದೇವಸ್ಥಾನ
    Next Article ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Davidcuh on ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • MichaelRem on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.