ರಾಜ್ಯದಲ್ಲಿ ಸುಧೀರ್ಘ ಅವಧಿಗೆ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದಿರುವ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಮ್ಮ ದಾಖಲೆಯ 17ನೇ ಮಂಡಿಸಿದ್ದಾರೆ. ಈಗಾಗಲೇ ಅವರು 16 ಬಜೆಟ್ ಮಂಡಿಸಿ ರಾಜ್ಯದಲ್ಲಿಯೇ ಅತ್ಯಧಿಕ ಮತ್ತು ದೇಶದಲ್ಲಿ ಎರಡನೇ ಅಧಿಕ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ದಾಖಲೆಯ 4ಲಕ್ಷದ 48 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಸಂಪನ್ಮೂಲ ಕ್ರೂಡೀಕರಣಕ್ಕಾಗಿ ಹಲವು ಮಾರ್ಗಗಳ ಜೊತೆಗೆ 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡುವ ಪ್ರಸ್ತಾವನೆ ಮಾಡಿದ್ದು
ಒಟ್ಟು22,957 ಕೋಟಿ ರೂಪಾಯಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ.
ಕನ್ನಡಿಗರ ಆಶೋತ್ತರಗಳಿಗೆ ಅನುಗುಣವಾಗಿ ನಡೆಯಲು ಸರ್ಕಾರ ಬದ್ಧವಾಗಿದೆ ಎಂದು ಘೋಷಿಸುವ ಮೂಲಕ ಬಜೆಟ್ ಭಾಷಣ ಆರಂಭಿಸಿದ ಅವರು,ಕರ್ನಾಟಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದೆ
ಕೃತಕ ಬುದ್ಧಿಮತ್ತೆಯಲ್ಲಿ ಕ್ರಾಂತಿಕಾರಿ ಬೆಳವಣಿಗೆ ಸಾಧಿಸಿದ್ದೇವೆ.ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ಸಿಕ್ಕಿದೆ ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಸ ಉದ್ಯೋಗ ಸೃಷ್ಟಿಗೆ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಶಾಂತವೇರಿ ಗೋಪಾಲಗೌಡ ಸಾರ್ವಜನಿಕ ಆಸ್ಪತ್ರೆ ಎಂದು ಮರು ನಾಮಕರಣ,
ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಜನರಿಗೆ ಹಸು, ಹೆಮ್ಮೆ ಖರೀದಿಸಲು 40 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ತಿಳಿಸಿದರು .
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿರುವ ಅವರು ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಫೆಬ್ರವರಿ 2026 ರ ವರೆಗೆ 1,21,598 ಕೋಟಿ ವೆಚ್ಚ ಮಾಡಿರುವುದಾಗಿ ತಿಳಿಸಿದರು.
ಮುಂಬರುವ ಆರ್ಥಿಕ ವರ್ಷದಲ್ಲಿ ಗೃಹ ಲಕ್ಷಿ ಯೋಜನೆಗೆ 28,608 ಕೋಟಿ,ಗೃಹ ಜ್ಯೋತಿಗೆ 10578 ಕೋಟಿ,ಶಕ್ತಿ ಯೋಜನೆಗೆ 5300 ಕೋಟಿ ರೂಪಾಯಿ,
ಅನ್ನಭಾಗ್ಯ ಯೋಜನೆಗೆ 6200 ಕೋಟಿ ಇದರಲ್ಲಿ
ಇಂದಿರಾ ಕಿಟ್ಗೆ 68200 ಕೋಟಿ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ
ವೈಷ್ಣೋದೇವಿ ಯಾತ್ರಿಕರಿಗೆ ಸರ್ಕಾರದಿಂದ 5 ಸಾವಿರ ರೂಪಾಯಿ ಸಹಾಯಧನ ಘೋಷಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಸಂಖ್ಯಾ ಬಲದ ಎರಡು ಮಹಿಳಾ ವೃದ್ದಾಶ್ರಮ ಪ್ರಾರಂಭ. ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 5000 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಹೇಳಿದರು
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಘೋಷಣೆ,ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಲು ಮಾನಸಿಕ ಆರೋಗ್ಯ ಸುಧಾರಣೆಗೆ 204 ಬಿಆರ್ಸಿ ಕೇಂದ್ರಗಳಲ್ಲಿ ಆರೋಗ್ಯ ಸಲಹೆಗಾರರ ನೇಮಕ ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಯ ಘೋಷಣೆ ಮಾಡಿದ್ದಾರೆ .
ಕಾಲೇಜು- ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಮರುಚಾಲನೆ ಎಸ್ಸಿ-ಎಸ್ಟಿ-ಒಬಿಸಿ ವಿದ್ಯಾರ್ಥಿಗಳಿಗೆ 40 ಹೊಸ ಹಾಸ್ಟೆಲ್ ನಿರ್ಮಾಣದ ಘೋಷಣೆ ಮಾಡಿದ್ದಾರೆ
ತಮ್ಮ ಈ ಬಜೆಟ್ ನಲ್ಲಿ ಅವರು ಶಿಕ್ಷಣ ಇಲಾಖೆಗೆ ದಾಖಲೆಯ 47,224 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ.ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ 34,929 ಕೋಟಿ, ಮೀನುಗಾರಿಕೆ ಪಶುಸಂಸೋಪನೆ ಇಲಾಖೆಗೆ 4084 ಕೋಟಿ
ಅನುದಾನ ತೆಗೆದಿರಿಸಿದ್ದಾರೆ.

