ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ರಾಜ್ಯದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ.
600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಮನೆ ಹಾಗು ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದನ್ನು ಪತ್ತೆ ಮಾಡಿ ದಾಳಿ ಮಾಡಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.
ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿಯ ಎಂಬುವರ ನಂಬರ್ 607ರ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸುತ್ತಿದೆ.