ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್-ಉಲ್-ಮುಜಾಹಿದ್ದೀನ್‌ನ ಕಮಾಂಡರ್ ನಿಸಾರ್ ಖಾಂಡೆ ಹತನಾಗಿದ್ದು, ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.
“ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ.ನಿಸಾರ್ ಖಾಂಡೆ ಹತ್ಯೆಯಾಗಿದೆ. 01 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ
ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ರಿಶಿಪೊರಾ ಗ್ರಾಮ ಕಪ್ರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ
Previous Articleಪೊಲೀಸರಿಗೆ ಹೊಡೆದು ಸಿದ್ದರಾಮಯ್ಯ ಬಳಿ ಹೋಗಿದ್ದ ವ್ಯಕ್ತಿ ಕೊನೆಗೂ ಬಂಧನ!!
Next Article ಶ್ರೀರಂಗಪಟ್ಟಣ ಹೈ ಅಲರ್ಟ್..!