Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿಯಲ್ಲಿ ರಿಂಗಣಿಸಿದ Satellite Phone..!
    ಸುದ್ದಿ

    ಕರಾವಳಿಯಲ್ಲಿ ರಿಂಗಣಿಸಿದ Satellite Phone..!

    vartha chakraBy vartha chakraJune 6, 2022Updated:June 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಕಳೆದ ಕೆಲ ತಿಂಗಳ ಹಿಂದೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸದ್ದು ಮಾಡಿ ತಣ್ಣಗಾಗಿದ್ದ ನಿಷೇಧಿತ ಸ್ಯಾಟಲೈಟ್ ಫೋನ್​ ಮತ್ತೆ ರಿಂಗಣಿಸಿದ್ದು ಕಳೆದ 10 ದಿನಗಳಲ್ಲಿ 4 ಕಡೆಗಳಿಂದ ಸ್ಯಾಟಲೈಟ್​ ಫೋನ್​​ ಸಂಪರ್ಕ ಸಾಧಿಸಿರುವ ಸಿಗ್ನಲ್​ ಪತ್ತೆಯಾಗಿದೆ.
    ಕರಾವಳಿಯ ಮೂರು ಕಡೆಗಳಲ್ಲಿ ಹಾಗು ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಲೈಟ್‌ ಫೋನ್‌ಗಳ ಸಿಗ್ನಲ್‌ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗು ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಲೈಟ್‌ ಫೋನ್ ಸಿಗ್ನಲ್ ಪತ್ತೆಯಾಗಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ.
    ಇದರ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಆರಂಭಿಸಿದೆ ಎಂದು ವರದಿಯಾಗಿದೆ. ನಿಷೇಧಿತ ಸ್ಯಾಟಲೈಟ್​ ಫೋನ್ ಬಳಕೆ ಮಾಡಿರುವ ವ್ಯಕ್ತಿಗಳ ಪತ್ತೆಗೆ ಇದೀಗ ಐಎಸ್​ಡಿ ಮುಂದಾಗಿದೆ. ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಸಲ ಕರೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ – ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು – ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್‌ ಫೋನ್‌ ಸಿಗ್ನಲ್ ಪತ್ತೆಯಾಗಿವೆ. ಹೀಗಾಗಿ, ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸ್ ಇಲಾಖೆಗೆ ಎಚ್ಚರಿಕೆ ಸಹ ನೀಡಿದೆ.
    ಶಂಕಿತ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಈ ಹಿಂದೆ ಕೂಡ ನಿಷೇಧಿತ ಸ್ಯಾಟಲೈಟ್ ಫೋನ್‌ಗಳ ಕುರಿತು ಕಳೆದ ವರ್ಷ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗಿದ್ದು, ಕೇಂದ್ರೀಯ ಸಂಸ್ಥೆಗಳೊಂದಿಗೆ ಸರ್ಕಾರವು ಸಮನ್ವಯದಿಂದ ಪರಿಸ್ಥಿತಿ ನಿಭಾಯಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದರು. 2020 ರಲ್ಲಿ 256 ಮತ್ತು 2021 ರಲ್ಲಿ 220 ಸ್ಯಾಟಲೈಟ್ ಫೋನ್ ಬಳಕೆಯ ನಿದರ್ಶನಗಳಿವೆ ಎಂದು ತಿಳಿಸಿದ್ದರು.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿನ ದಾಳಿ :ಪಾರಾದ ಯುವಕ
    Next Article ಹರೇಕಳ ಅಣೆಕಟ್ಟು – ಪಾವೂರು ಗ್ರಾಮದ ಉಳಿಯ ದ್ವೀಪಕ್ಕೆ ವಿಪಕ್ಷ ನಾಯಕ ಯು.ಟಿ.ಖಾದರ್ ಭೇಟಿ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Tracymix on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.