ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷ್ಕರಣೆಯ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿತ್ತಿರುವ ಬೆನ್ನಲ್ಲೇ ಪರಿಷ್ಕರಣೆಯಲ್ಲಿ ಯಾವುದಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಆದರೂ ಕೆಲವರು ಇದರಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿದಿನ ಗೊಂದಲದ ಹೇಳಿಕೆಗಳನ್ನು ನೀಡುತ್ತಾ ಜನರಲ್ಲಿ ತಪ್ಪು ಭಾವನೆ ಮೂಡಿಸುತ್ತಿದ್ದಾರೆ. ರಾಷ್ಟ್ರಕವಿ ಕುವೆಂಪು, ಬಸವಣ್ಣ ಸೇರಿದಂತೆ ಮಹನೀಯರ ಬಗ್ಗೆ ಪಠ್ಯಪುಸ್ತಕದಲ್ಲಿ ಯಾವುದಾದರೂ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲಾಗುವುದು. ಪುಸ್ತಕಗಳನ್ನು ಓದದೆ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ನಾನು ಈಗಲೂ ಕೂಡ ಹೇಳುವುದೇನೆಂದರೆ ಪಠ್ಯ ಪುಸ್ತಕದಲ್ಲಿ ಲೋಪದೋಷವಿದ್ದರೆ ಸರಿಪಡಿಸಿಕೊಂಡು ಮರು ಮುದ್ರಣ ಮಾಡಿ ಮಕ್ಕಳಿಗೆ ವಿತರಣೆ ಮಾಡುತ್ತೇವೆ. ಪ್ರತಿಪಕ್ಷದವರು ಮೊದಲು ಗೊಂದಲ ಸೃಷ್ಟಿಸುವುದನ್ನು ಕೈಬಿಡಲಿ ಎಂದು ಹೇಳಿದರು.
Previous Articleಆರ್.ಎಸ್.ಎಸ್ ದೇಶ ಭಕ್ತಿ ಕೆಲಸ ಮಾಡುತ್ತಿದೆ- CM ಬೊಮ್ಮಾಯಿ
Next Article ರಸ್ತೆಗೆ ನಾಥೂರಾಂ ಗೋಡ್ಸೆ ಹೆಸರು!