ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಲೋಕಾಯುಕ್ತರ ನೇಮಕಾತಿ ತೀರ್ಘವೇ ಆಗಲಿದೆ.ಆ ವಿಚಾರದಲ್ಲಿ ಇನ್ನು ವಿಳಂಬವಾಗುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸಭಾ ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಜೆಡಿಎಸ್ ಕಾಂಗ್ರೆಸ್ ಏನು ಮಾಡುತ್ತಾರೋ ಗೊತ್ತಿಲ್ಲ. ನಮಗೆ ೩ ಸ್ಥಾನ ಗೆಲ್ಲಲು ಮತಗಳಿವೆ ನಾವು ಚುನಾವಣೆ ಗೆಲ್ಲುತ್ತೆವೆ ಎಂದರು.
ಮೇಕದಾಟು ಯೋಜನೆ ತಡೆ ಹಿಡಿಯುವ ಸುಪ್ರೀಂಕೋರ್ಟ್‌ಗೆ ತಮಿಳುನಾಡು ಅರ್ಜಿ ವಿಚಾರಕ್ಕರ ಸಂಬಧಿಸಿದಂತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡನೆ ವ್ಯಕ್ತಪಡಿಸಿದರು. ಇದು ನ್ಯಾಯ ಸಮ್ಮತವಲ್ಲ. ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಸರಿಯಾದ ಕ್ರಮವೂ ಅಲ್ಲ.ಸುಪ್ರೀಂಕೋರ್ಟ್ ನಮಗೆ ನೋಟಿಸ್ ಕೊಟ್ಟಿದ್ದರು. ಅದಕ್ಕೆ ನಾವು ಸಮರ್ಥವಾದ ಉತ್ತರ ಕೊಟ್ಟಿದ್ದೇವೆ.ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸುಪ್ರೀಂಕೋರ್ಟ್ ಆದೇಶದನ್ವಯ ರಚನೆಯಾಗಿದೆ. ಕಾವೇರಿ ನದಿಗೆ ಸಂಬಂಧಪಟ್ಟಂತೆ ಯಾವ ಯೋಜನೆ ಜಾರಿಗೊಳಿಸಬೇಕು, ಜಾರಿಗೊಳಿಸಬಾರದು ಎಂದು ತೀರ್ಮಾನ ಮಾಡುವ ಅಧಿಕಾರ ಪ್ರಾಧಿಕಾರಕ್ಕೆ ಮಾತ್ರ ಇದೆ. ಮೇಕೆದಾಟು ಯೋಜನೆ ಸಂಬಂಧ ಈಗಾಗಲೇ 16-17 ಸಭೆಗಳು ಆಗಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು