ಜಾರ್ಖಂಡ್: ಅಪ್ರಾಪ್ತೆಯರ ಮೇಲೆ ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ಗ್ರಾಮಸ್ಥರು ಬೈಕ್ ಸಮೇತ ಸುಟ್ಟು ಹಾಕಿದ್ದಾರೆ. ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.
ಜಾರ್ಖಂಡ್ನ ಗುಮ್ಲಾದಲ್ಲಿ ಈ ಘಟನೆ ನಡೆದಿದೆ. ಸುನಿಲ್ ಹಾಗು ಆಶಿಶ್ ಆರೋಪಿಗಳು. ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಅಶಿಶ್ ಹಾಗು ಸುನಿಲ್ ಅತ್ಯಾಚಾರವೆಸಗಿರುವ ಆರೋಪವಿತ್ತು. ಮಾತುಕತೆ ಮೂಲಕ ಪ್ರಕರಣ ಇತ್ಯರ್ಥ ಮಾಡಲು ಇಬ್ಬರೂ ಆರೋಪಿಗಳನ್ನು ಗ್ರಾಮಕ್ಕೆ ಕರೆಸಿಕೊಂಡ ಗ್ರಾಮಸ್ಥರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡ ಆರೋಪಿಗಳು ಸ್ಥಳದಿಂದ ಪರಾರಿಯಾದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮೃತಪಟ್ಟಿದ್ದು, ಆಶಿಶ್ ಸ್ಥಿತಿ ಚಿಂತಾಜನಕವಾಗಿದೆ.