ಸಾಗರ(ಮಧ್ಯಪ್ರದೇಶ): ಅಕ್ಕನ ಸಾವಿನಿಂದ ಆಘಾತಕ್ಕೊಳಗಾದ ತಮ್ಮನೊಬ್ಬ ಅಕ್ಕನ ಚಿತೆಗೆ ಹಾರಿ ಪ್ರಾಣ ಬಿಟ್ಟ ಆಘಾತಕಾರಿ ಪ್ರಕರಣ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ.
ಬಹೇರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಜ್ಗವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರೀತಿ ಎಂಬಾಕೆ ನಾಪತ್ತೆಯಾದ ಕೆಲ ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದರು, ಇದರಿಂದ ನೊಂದ ಅವರ ಚಿಕ್ಕಪ್ಪನ ಮಗ ಕರಣ್ ಧರ್ ಚಿತೆಗೆ ಹಾರಿದ್ದಾರೆ.
ಈ ವೇಳೆ ಅಲ್ಲಿದ್ದ ಗ್ರಾಮಸ್ಥರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ ದಾರಿ ಮಧ್ಯದಲ್ಲೇ ಅವರು ಅಸುನೀಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಸಾಗರ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
Previous Articleಕಿಮ್ಸ್ ನಲ್ಲಿ ಕಳ್ಳತನವಾದ ಮಗು ರಾತ್ರೋರಾತ್ರಿ ಪತ್ತೆ
Next Article ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೋನಾ ಅಬ್ಬರ