Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಕ್ತಿ ಪ್ರದರ್ಶನ
    ಸುದ್ದಿ

    ಕಾಂಗ್ರೆಸ್ ಶಕ್ತಿ ಪ್ರದರ್ಶನ

    vartha chakraBy vartha chakraJune 16, 2022Updated:June 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.16- ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜ ಭವನಕ್ಕೆ ಲಗ್ಗೆ ಹಾಕಿ ಪ್ರತಿಭಟನೆ ನಡೆಸಿದರು.
    ಕ್ವಿನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಬಳಿ ಇಂದು ಬೆಳಗ್ಗೆಯಿಂದ  ಸೇರಿದ ಸಾವಿರಾರು ಕಾಂಗ್ರೆಸ್   ಮುಖಂಡರು, ಕಾರ್ಯಕರ್ತರು ಅಲ್ಲಿಂದ ರಾಜಭವನ ಚಲೋ ಹೊರಟಿದ್ದು‌ ಮಾರ್ಗ ಮಧ್ಯದಲ್ಲಿ ಪೊಲೀಸರು ತಡೆದರು.
    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದಲ್ಲಿ ಹೊರಟ ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್‌, ಧ್ರುವನಾರಾಯಣ, ಈಶ್ವರ ಖಂಡ್ರೆ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಇನ್ನಿತರ ಹಿರಿಯ ನಾಯಕರು ಪಾಲ್ಗೊಂಡಿದ್ದರು.
    ನಗರದ ಸೇರಿದಂತೆ ರಾಜ್ಯದ ವಿವಿಧೆಡೆ ಯಿಂದ ಬಂದಿದ್ದ ಸಾವಿರಾರು ಸಂಖ್ಯೆಯ  ಕಾಂಗ್ರೆಸ್‌ ಕಾರ್ಯಕರ್ತರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ರಾಜಭವನ ಚಲೋ ಹೊರಡುವ ಮುನ್ನ ಕಾಂಗ್ರೆಸ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನ್ಯಾಯಯುತವಾಗಿ ಪ್ರತಿಭಟನೆ ನಡೆಸುತ್ತಿರುವುದನ್ನು ಹತ್ತಿಕ್ಕಲಾಗುತ್ತಿದೆ ಎಂದು ದೂರಿದರು.
    ಪ್ರತಿಭಟನಾ ನಿರತರ ಮೇಲೆ‌ ಸುಳ್ಳು ಕೇಸು ಹಾಕಿ ಹೆದರಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಆಸ್ತಿ ಅವರಿಗೆ ತೊಂದರೆಯಾದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
    ಕಾಂಗ್ರೆಸ್ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಕಾರ್ಯಕರ್ತರನ್ನು ಅಲ್ಲಲ್ಲಿಯೇ ತಡೆದಿದ್ದಾರೆ. ಹಾಗಾಗಿ ಕೆಪಿಸಿಸಿ ಕಚೇರಿವರೆಗೂ ಹೆಚ್ಚಿನ ಜನ ಆಗಮಿಸಲು ಸಾಧ್ಯವಾಗಲಿಲ್ಲ. ಕೆಲ ನಾಯಕರನ್ನು ಅವರ ಮನೆ ಬಳಿಯಲ್ಲೇ ನಿರ್ಬಂಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಕಾರ್ಯಕರ್ತರ ಮೆರವಣಿಗೆಯನ್ನು ತಡೆಯಲಾಯಿತು.
    ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕ್ವೀನ್ಸ್‌‌ ರೋಡ್‌- ಇಂಡಿಯನ್ ಎಕ್ಸ್‌ ಪ್ರೆಸ್, ಜಿಪಿಓ‌ ಸಿಗ್ನಲ್, ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತ‌ನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್‌, ನಂದಿ‌ದುರ್ಗ ‌ರಸ್ತೆ, ವಿಧಾನಸೌಧ, ಕೆ ಆರ್ ಸರ್ಕಲ್‌‌ ಸೇರಿದಂತೆ‌ ನಗರದ ಹೃದಯ ಭಾಗದಲ್ಲಿ‌ ಸಂಚಾರ ದಟ್ಟಣೆ ಉಂಟಾಯಿತು.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಖತರ್ನಾಕ್ ಹಂತಕ..!
    Next Article ವೀಕ್ಷಕರಿಗೆ ಬೇಡವಾದ ‘ಕನ್ನಡತಿ’
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • LinwoodGah on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Tracymix on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.