Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ
    ಸುದ್ದಿ

    ಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ

    vartha chakraBy vartha chakraJune 21, 2022Updated:June 21, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಇಲ್ಲಿನ ಜ್ಞಾನಭಾರತಿ ಆವರಣದಲ್ಲಿರುವ `ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ (ಬೇಸ್) ನೂತನ ಕ್ಯಾಂಪಸ್ಸನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು.

    ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಸೋಮವಾರ ಬೆಂಗಳೂರಿಗೆ ಬಂದಿಳಿದ ಮೋದಿಯವರ ಈ ಕಾರ್ಯಕ್ರಮದಲ್ಲಿ ಭಾಷಣಗಳಿರಲಿಲ್ಲ; ಘೋಷಣೆಗಳಿರಲಿಲ್ಲ. ಮೌನದ ಚೆಲುವಿನಲ್ಲಿ ಅರ್ಥಪೂರ್ಣವಾಗಿ ನಡೆದ ಈ ಕಾರ್ಯಕ್ರಮದುದ್ದಕ್ಕೂ ಬೇಸ್ ಕ್ಯಾಂಪಸ್ಸಿನಲ್ಲಿ ಅವ್ಯಕ್ತ ಸಂಭ್ರಮ ಮನೆಮಾಡಿತ್ತು.

    ಕೊಮ್ಮಘಟ್ಟದಿಂದ ನೇರವಾಗಿ ಬೇಸ್’ಕ್ಯಾಂಪಸ್ ತಲುಪಿದ ಪ್ರಧಾನಿಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗೌರವಾದರಗಳಿಂದ ಬರಮಾಡಿಕೊಂಡರು. ಬಳಿಕ ಮೋದಿ ಅವರು ಮೊದಲಿಗೆ,ಬೇಸ್’ ಆವರಣದಲ್ಲಿ ಪ್ರತಿಷ್ಠಾಪಿಸಿರುವ 22 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಮೂಲಕ ಸಂವಿಧಾನ ಶಿಲ್ಪಿ ಮತ್ತು ಅರ್ಥಶಾಸ್ತ್ರಜ್ಞ ಅಂಬೇಡ್ಕರ್ ಅವರಿಗೆ ಸೂಕ್ತ ಸ್ಮರಣೆಯ ಸಂಕೇತವನ್ನು ಸಮರ್ಪಿಸಿದ ಭಾವ ನೆರೆದಿದ್ದವರಲ್ಲಿ ಮನೆ ಮಾಡಿತ್ತು.

    ಇದಾದ ಬಳಿಕ ಬೇಸ್’ ಕ್ಯಾಂಪಸ್ಸಿನ ಆಡಳಿತ ವಿಭಾಗಕ್ಕೆ ತೆರಳಿದ ಅವರು, 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 13 ಬ್ಲಾಕ್ ಗಳನ್ನು ಲೋಕಾರ್ಪಣೆ ಮಾಡಿದರು. ಅಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರುಬೇಸ್’ ಪರಿವಾರದ ಪರವಾಗಿ ಅಂಬೇಡ್ಕರರ ಚಿಕ್ಕ ಪ್ರತಿಮೆಯನ್ನು ಪ್ರಧಾನಿಗೆ ಉಡುಗೊರೆಯಾಗಿ ಕೊಟ್ಟರು. ಪ್ರಧಾನಿ ಇದನ್ನು ಹರ್ಷಚಿತ್ತರಾಗಿ ಸ್ವೀಕರಿಸಿದರು.

    ಮೋದಿ ಅವರ ವೇಳಾಪಟ್ಟಿಯೆಂದರೆ, ಅಲ್ಲಿ ಅರೆನಿಮಿಷವೂ ವ್ಯರ್ಥವಾಗುವ ಪ್ರಶ್ನೆಯೇ ಇಲ್ಲ! ಇದಕ್ಕೆ ತಕ್ಕಂತೆ, ರಾಜ್ಯ ಸರಕಾರವು ಟಾಟಾ ಸಮೂಹದ ನೆರವಿನೊಂದಿಗೆ 4,736 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಿರುವ 150 ಸರಕಾರಿ ಐಟಿಐಗಳನ್ನು ರಾಜ್ಯಕ್ಕೆ ಸಮರ್ಪಿಸಿದರು. ಮೋದಿಯವರು ಇವುಗಳ ಚಾಲನೆಗೆ ಗುಂಡಿ ಒತ್ತುತ್ತಿದ್ದಂತೆಯೇ, ರಾಜ್ಯಾದ್ಯಂತ ಇರುವ ಐಟಿಐಗಳೆಲ್ಲ ನೂತನ ಅಧ್ಯಾಯಕ್ಕೆ ತೆರೆದುಕೊಂಡು, ಕ್ರಿಯಾಶೀಲವಾದವು. ಇದನ್ನು ಕಂಡು, ಮೋದಿ ಸಂತಸ ಪಟ್ಟರು.

    ಕ್ಷಣಾರ್ಧದಲ್ಲಿ ವಿದ್ಯಾರ್ಥಿಗಳ ಬಳಿಗೆ ಹೋದ ಅವರು, ಅವರೊಂದಿಗೆ ಐದಾರು ನಿಮಿಷ ಕಳೆದು, ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸಿದರು. ಹಾಗೆಯೇ, ಕ್ಯಾಮರಾ ಕ್ಲಿಕ್ ಗಳಿಗೆ ಸಾಕ್ಷಿಯಾದರು. ಆದರೆ, ಏಕೋ ಸಮಾಧಾನವಾಗದೆ, `ಅಲ್ಲಿರುವ ಮೆಟ್ಟಿಲ ಬಳಿಗೆ ನೀವೆಲ್ಲ ಬನ್ನಿ. ಅಲ್ಲಿ ಫೋಟೋ ಸೆಷನ್ ಆಗಲಿ’ ಎಂದು ಹೇಳಿ, ಉನ್ನತೀಕರಿಸಿರುವ ಐಟಿಐ ಮಾದರಿಯನ್ನು ವೀಕ್ಷಿಸಲು ತೆರಳಿದರು. ಅಲ್ಲಿ ನಿಯೋಜಿತರಾಗಿದ್ದ ಸಿಬ್ಬಂದಿಯಿಂದ ಐಟಿಐ ಸಾಧನ-ಸಲಕರಣೆಗಳ ಬಗ್ಗೆ ಮೋದಿ ಮಾಹಿತಿ ಪಡೆದುಕೊಂಡರು.

    ಇಲ್ಲಿಂದ, ಕ್ಯಾಂಪಸ್ಸಿನ ಮೆಟ್ಟಿಲುಗಳ ಬಳಿ ತೆರಳಿದ ಅವರು, ಇನ್ನೊಮ್ಮೆ ಕ್ಯಾಮರಾಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಬಂಧಿಯಾದರು. ಇವೆಲ್ಲದರ ಮಧ್ಯೆಯೇ ಕಾರ್ಯಕ್ರಮದಲ್ಲಿದ್ದ ಗಣ್ಯರಿಗೆ ಕೈ ಮುಗಿದು, ಅವರೊಂದಿಗೆ ಅರೆಘಳಿಗೆ ಮಾತನಾಡುತ್ತಲೇ ಮುಂದಡಿ ಇಡುತ್ತ ಹೋದರು. ಬೇಸ್ ಕ್ಯಾಂಪಸ್ಸಿನಿಂದ ಪುನಃ ಕೊಮ್ಮಘಟಕ್ಕೆ ಹೊರಟಾಗಲೂ ಮೋದಿ, ಎಲ್ಲರಿಗೂ ವಂದನೆಗಳನ್ನು ಅರ್ಪಿಸಿ, ತಮ್ಮ ಸುಸಂಸ್ಕೃತಿಯನ್ನು ಪ್ರದರ್ಶಿಸಿದರು. ಕೇವಲ ಒಂದು ಗಂಟೆ ಕಾಲಕ್ಕೂ ಕಡಿಮೆ ಅವಧಿಯಲ್ಲಿ ಬೇಸ್’ ಆವರಣ ಉಜ್ವಲ ಅಧ್ಯಾಯಕ್ಕೆ ಸಾಕ್ಷಿಯಾಯಿತು!

    ಅರ್ಥಶಾಸ್ತ್ರ ಮತ್ತು ಸಮಾಜವಿಜ್ಞಾನಗಳ ಉನ್ನತಾಧ್ಯಯನಕ್ಕೆ ಮೀಸಲಾಗಿರುವ `ಬೇಸ್’ ವಿ.ವಿ.ಯಲ್ಲಿ ಇನ್ನು ಮೂರು ವರ್ಷಗಳಲ್ಲಿ 1,100 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಲಭ್ಯವಾಗಲಿದೆ. ಹಾಗೆಯೇ, ಮೇಲ್ದರ್ಜೆಗೇರಿಸಿರುವ ಐಟಿಐಗಳಿಂದ 1.70 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.

    ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಸೋಮಣ್ಣ, ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಶ್ರೀರಾಮುಲು, ಕುಲಪತಿ ಡಾ.ಭಾನುಮೂರ್ತಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಉಪಸ್ಥಿತರಿದ್ದರು.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಲ್ಲಿ ಮೋದಿ ಯೋಗಾಯೋಗ
    Next Article ನವೀನ್ ಕುಟುಂಬಕ್ಕೆ ಮೋದಿ ಸಾಂತ್ವನ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Tracymix on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • LeonardReawn on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.