ಬೆಂಗಳೂರು, ಜೂ.23-ಎರಡು ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟರಾಯನಪುರದ ಅಂಬು ಅಲಿಯಾಸ್ ಪಾರಿವಾಳ (26)ಹಾಗೂ ಅಭಿಷೇಕ್ ಅಲಿಯಾಸ್ ಅಂಬು(28)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಬಂಧಿತರಿಂದ ಸುಮಾರು 7 ಕೆ.ಜಿ 550 ಗ್ರಾಂಗಾಂಜಾ,ಹಾಗೂ 800ರೂ ನಗದನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು. ಬ್ಯಾಟರಾಯನಪುರದ ಎರಡು ಪ್ರತ್ಯೇಕ ಸ್ಥಳದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಬ್ಯಾಟರಾಯನಪುರ ಪೊಲೀಸ್ ಇನ್ಸ್ಪೆಕ್ಟರ್ ಶಂಕರ್ ನಾಯಕ್.ಜಿ.ಕೆ.ಮತ್ತವರ ಸಿಬ್ಬಂದಿಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Previous Articleನೀರಾವರಿ ನಿಗಮದಲ್ಲಿ ಭ್ರಷ್ಟಾಚಾರ–ರೈತ ಮಹಿಳೆಯರ ಧರಣಿ
Next Article Facebook friend ಗಾಗಿ ಗಳಿಸಿದ್ದೆಲ್ಲಾ ಕಳೆದುಕೊಂಡ..!!