ನವದೆಹಲಿ: ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಸಹಿ ಹಾಕಲು ಪಕ್ಷದ ಎಲ್ಲ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಆ ಕೆಲಸಕ್ಕೆ ಬಂದಿದ್ದೇನೆ. ಜತೆಗೆ ಯಾವುದೇ ಕೇಂದ್ರ ಸಚಿವರನ್ನು ಭೇಟಿ ಮಾಡುವುದಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಾಗ ನಾನೇ ಅದನ್ನು ಅಧಿಕೃತವಾಗಿ ಹೇಳುತ್ತೇನೆ ಎಂದರು