ಬೆಂಗಳೂರು,ಜೂ.25-ಮಂತ್ರಿಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸುಶೀಲ್ ಪಾಂಡುರಂಗ್ ಮಂತ್ರಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಡಿ ಅಧಿಕಾರಿಗಳ ವಿಚಾರಣೆಯನ್ನು ನಿನ್ನೆ ಎದುರಿಸಿದ್ದ ಸುಶೀಲ್ ಅವರನ್ನು ಇಂದು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಸುಶೀಲ್ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ವಶಕ್ಕೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ವ್ಯವಹಾರದಲ್ಲಿ ಅನೇಕ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಲವು ಅಕ್ರಮಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಸಮೇತ ಜಾರಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದ್ದರು.
ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸುಶೀಲ್ ಪಾಂಡುರಂಗ ಮಂತ್ರಿ ಅವರನ್ನು ವಶಕ್ಕೆ ಪಡೆದಿದ್ದಾರೆ.
Previous Articleಬೆಳಗಾವಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಖಾಸಗಿ ಆಸ್ಪತ್ರೆ ಸೀಜ್…!
Next Article ಸೆನ್ಸಾರ್ ಪಾಸ್ ಆದ ಬೈರಾಗಿ..ಬೈರಾಗಿ ಯು/ಎ ಸರ್ಟಿಫಿಕೇಟ್