Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಯತ್ನ…ಐವರು ಅಂದರ್…!!
    ಸುದ್ದಿ

    ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬ್ಲಾಕ್ ಮೇಲ್ ಯತ್ನ…ಐವರು ಅಂದರ್…!!

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯೂಟ್ಯೂಬ್ ಚಾನೆಲ್ ಹೆಸರೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್‌ ಮೇಲ್ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್ ಚಾನಲ್ (ಕೆಪಿವಿ ನ್ಯೂಸ್ )ನ ಅಭಿಲಾಷ್, ಮಣಿ, ಪ್ರದೀಪ್, ಬಸವರಾಜು, ನವೀನ್‌ ಕುಮಾರ್ ಬಂಧಿತರು. ಇಂಡಿಕಾ ಕಾರಿನಲ್ಲಿ ಎರಡು ದಿನಗಳ ಹಿಂದೆ ಬಂದ ಆರೋಪಿಗಳು ಮಧ್ಯಾಹ್ನ ಅಶೋಕ ರಸ್ತೆಯಲ್ಲಿರುವ ಉಮರ್ ಷರೀಫ್ ಎಂಬವರ ಮನೆಗೆ ಬಂದಿದ್ದಾರೆ. ಕ್ಯಾಮರಾ ತೆಗೆದು ಚಿತ್ರೀಕರಣಕ್ಕೆ ಪ್ರಯತ್ನಿಸಿದಾಗ ಪರೀಫ್‌ ವಿರೋಧಿಸಿದ್ದಾರೆ.
    ಆ ವೇಳೆ ನಿಮ್ಮ ಮನೆಯಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದೀರಾ ನಾವು ಅದನ್ನು ಟಿವಿಯಲ್ಲಿ ಹಾಕುತ್ತೇವೆ ಎಂದು ಆರೋಪಿಗಳು ಬೆದರಿಸಿದ್ದಾರೆ. ಅದೇ ವೇಳೆ ಗುಂಪಿನಲ್ಲಿದ್ದ ಒಬ್ಬ ತಾನು ಬೆಂಗಳೂರಿನಿಂದ ಬಂದಿರುವ ಕ್ರೈಂ ಪೊಲೀಸ್ ಎಂದು ಹೇಳಿ ಕೂಗಾಡಿದ್ದಾನೆ.
    ಈ ವೇಳೆ ಸ್ಥಳೀಯರು ಗುಂಪುಗೂಡಿದ್ದಾರೆ. ಮಾಜಿ ಕಾರ್ಪೊರೇಟರ್ ಸುಹೇಲ್ ಬೇಗ್ ಕೂಡ ಸ್ಥಳಕ್ಕೆ ಆಗಮಿಸಿ ಕ್ರೈಂ ಪೊಲೀಸ್ ಎಂದು ಹೇಳಿದ ವ್ಯಕ್ತಿಯೊಂದಿಗೆ ಈ ಮನೆಯಲ್ಲಿ ಯಾವುದೇ ಗ್ಯಾಸ್ ರೀ-ಫಿಲ್ಲಿಂಗ್ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ನೀವು ರೈಡ್ ಮಾಡಲೇಬೇಕಾದರೆ ಮಂಡಿ ಠಾಣೆ ಪೊಲೀಸರನ್ನು ಕರೆಸಿಕೊಳ್ಳಿ. ಇದು ಸೆನ್ಸಿಟಿವ್ ಏರಿಯಾ. ಸ್ಥಳೀಯ ಪೊಲೀಸರು ಇಲ್ಲದಿದ್ದರೆ ತೊಂದರೆಯಾಗಬಹುದು ಎಂದು ಹೇಳಿದ್ದಾರೆ.
    ಈ ವೇಳೆ ಆತ ಲೋಕಲ್ ಪೊಲೀಸ್ ಎಲ್ಲಾ ಯಾಕೆ ನಮಗೆ ಏನಾದರೂ ಕೊಡಿಸಿಬಿಡಿ ಎಂದು ಹೇಳುತ್ತಿದ್ದಂತೆಯೇ ಸುಹೇಲ್ ಬೇಗ್ ಅವರಿಗೆ ಈತ ನಕಲಿ ಪೊಲೀಸ್ ಎಂಬುದು ಮನವರಿಕೆಯಾಗಿದೆ.
    ತಕ್ಷಣವೇ ಮಂಡಿ ಠಾಣೆಗೆ ಕರೆ ಮಾಡಿದ್ದಾರೆ. ಐದು ಮಂದಿ ಹಾಗು ಕಾರನ್ನು ವಶಪಡಿಸಿಕೊಂಡ ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
    ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ…

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ
    Next Article ಅನೈತಿಕ ಸಂಬಂಧ ಶಂಕೆ…ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ…ಮೈಸೂರಿನಲ್ಲಿ ಭೀಕರ ಕೊಲೆ… !!
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.