ಇತ್ತೀಚೆಗೆ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ಸ್ಟಾರ್ ನಟ ನರೇಶ್ ವಿವಾಹದ ವಿಷಯ ಸಾಕಷ್ಟು ಚರ್ಚೆ ಆಗಿತ್ತು. ಇದೀಗ ಈ ಸುದ್ದಿಗೆ ಇನ್ನಷ್ಟು ಪುಷ್ಟಿ ನೀಡುವ ವಿಚಾರವನ್ನು ನರೇಶ್ ಪತ್ನಿ ರಮ್ಯಾ ರಘುಪತಿ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಮ್ಯಾ ರಘುಪತಿ ನರೇಶ್ ನನಗೆ ಡೈವೋರ್ಸ್ ನೋಟೀಸ್ ಕೊಟ್ಟಿದ್ದು ಅವರಿಗೆ ಪವಿತ್ರಾ ಲೋಕೇಶ್ ಜೊತೆ ವಿವಾಹ ಆಗಬೇಕೆನ್ನೋ ಓಂ ಇದೆ ಎಂದಿದ್ದಾರೆ ಅಲ್ಲದೆ ನರೇಶ್ ಒಬ್ಬ ಹೆಣ್ಣುಬಾಕ ಎಂದೂ ಆರೋಪಿಸಿದ್ದಾರೆ.
ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿ ಪತಿ ಬಗ್ಗೆ ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಇಬ್ಬರೂ ಈಗಾಗಲೇ ಮದುವೆಯಾಗಿದ್ದಾರೆ ಎನ್ನುವ ಮಾತು ಟಾಲಿವುಡ್‌ನಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ. ಇನ್ನೂ ಮೂರನೇ ಪತ್ನಿಗೆ ವಿಚ್ಛೇದನ ನೀಡದೆ ನಾಲ್ಕನೇ ಮದುವೆಯಾಗಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಈಗ ಸ್ವತ: ನರೇಶ್ ಮೂರನೇ ಪತ್ನಿ ರಮ್ಯಾ ಪತಿಯ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ.