ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನಿಲುವಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಬೆಂಬಲ ಸೂಚಿಸಿದ್ದಾರೆ. ಮಹಾರಾಷ್ಟ್ರ ಜನರು ನಿಮ್ಮನ್ನು ಬೆಂಬಲಿಸುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನೀವು ತುಂಬಾ ಚೆನ್ನಾಗಿ ಕೆಲಸ ಮಾಡಿದ್ದೀರಿ. ಮತ್ತು ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ನನಗೆ ಖಾತ್ರಿಯಿದೆ.. ಚಾಣಕ್ಯರು ಇಂದು ಲಡ್ಡೂಗಳನ್ನು ತಿನ್ನಬಹುದು.. ಆದರೆ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ.. ನಿಮಗೆ ಹೆಚ್ಚಿನ ಶಕ್ತಿ ಲಭಿಸುತ್ತದೆ ಎಂದು ಪ್ರಕಾಶ್ ರಾಜ್ ಟ್ವೀಟ್ ನಲ್ಲಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ನಾಯಕಿ ಏಕನಾಥ ಶಿಂಧೆ ಠಾಕ್ರೆ ವಿರುದ್ಧ ನಿಂತಿದ್ದು ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ರಾಜ್ಯಪಾಲರು ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಠಾಕ್ರೆ ಸುಪ್ರೀಂ ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದ ಕಾರಣ. ಬೇರೆ ದಾರಿಯಿಲ್ಲದೇ ಠಾಕ್ರೆ ನಿನ್ನೆ ರಾತ್ರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Previous Articleಇನ್ನಿಲ್ಲ ಸೂರಿ ಸಿನಿಮಾ ಮುಹೂರ್ತ
Next Article ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟ ಕ್ಲೀನ್…!