Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಡನಂತೆ ಕಾಣುತ್ತಿದ್ದ ಮಗನನ್ನು ಕೊಂದ‌ ತಾಯಿ | Suchana Seth
    Trending

    ಗಂಡನಂತೆ ಕಾಣುತ್ತಿದ್ದ ಮಗನನ್ನು ಕೊಂದ‌ ತಾಯಿ | Suchana Seth

    vartha chakraBy vartha chakraJanuary 12, 2024Updated:January 16, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.12- ತನ್ನ ಮಗ ತನ್ನ ಪತಿಯನ್ನು ಹೋಲುತ್ತಾನೆ. ಮಗುವನ್ನು ನೋಡಿದಾಗಲೆಲ್ಲಾ ವಿಚ್ಚೇಧಿತ ಪತಿ ನೆನಪಿಗೆ ಬರುತ್ತಾರೆ ಎಂದು ಕ್ರೋಧಗೊಂಡು ತನ್ನ ಮಗುವನ್ನೇ ಕೊಲೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
    ನಾಲ್ಕು ವರ್ಷದ ಮಗುವನ್ನು ಕೊಲೆ ಮಾಡಿ ಬಂಧಿತಳಾಗಿರುವ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಸುಚನಾ ಸೇಠ್‌ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈ ಅಂಶ ಗೊತ್ತಾಗಿದೆ.
    ತನಿಖಾ ತಂಡವು ಗೋವಾದಲ್ಲಿ ಸುಚನಾ ಸೇಠ್ ತಂಗಿದ್ದ ಹೋಟೆಲ್ ನಲ್ಲಿ ಪರಿಶೀಲನೆ ನಡೆಸಿದ್ದು ಅಲ್ಲಿ ಚಾಕು ಹಾಗೂ ಬ್ಯಾಗ್ ನಲ್ಲಿದ್ದ ಪತ್ರವೊಂದು ಪತ್ತೆಯಾಗಿದ್ದು ಅದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
    ಪ್ರಕರಣ ಸಂಬಂಧ ಸುಚನಾ ಸೇಠ್ ಮಾನಸಿಕ ಸ್ಥಿತಿಯ ಕುರಿತು ಹಲವು ಪ್ರಶ್ನೆಗಳು ಮೂಡತೊಡಗಿದ್ದು, ಈ ಬಗ್ಗೆ ಪರೀಕ್ಷೆ ನಡೆಸಿರುವ ಮನೋವೈದ್ಯರು ಯಾವುದೇ ಮಾಹಿತಿಗಳನ್ನೂ ಬಹಿರಂಗಪಡಿಸಿಲ್ಲ.

    ಗೋವಾ ಪೊಲೀಸರು ಸುಚನಾಳನ್ನು ನಿನ್ನೆ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಪರೀಕ್ಷೆಗಾಗಿ ಕರೆದೊಯ್ದಿದ್ದು, ವೈದ್ಯರು ಪರೀಕ್ಷೆ ನಡೆಸಿದ್ದಾರೆ.
    ಈ ನಡುವೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಆರೋಪಿ ನೆಲೆಸಿದ್ದ ಹೋಟೆಲ್ ರೂಮ್ ನಲ್ಲಿ (ಅಪರಾಧ ನಡೆದ ಸ್ಥಳ) ಚಾಕು ಹಾಗೂ ಬ್ಯಾಗ್ ನಲ್ಲಿ ಪತ್ರವೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
    ತನಿಖೆ ವೇಳೆ ಸುಚನಾ ಮಲಗಿದ್ದಾಗ ಮಗು ಸಾವನ್ನಪ್ಪಿದೆ ಎಂದು ಹೇಳಿಕೊಂಡಿದ್ದು, ಒಂದು ವೇಳೆ ಮಗು ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದರೆ, ಹೋಟೆಲ್ ಸಿಬ್ಬಂದಿ ಅಥವಾ ವೈದ್ಯರ ಸಹಾಯವನ್ನೇಕೆ ಕೇಳಲಿಲ್ಲ? ಮಗುವಿನ ಮೃತದೇಹವನ್ನು ಸೂಟ್ ಕೇಸ್ ನಲ್ಲಿ ಇರಿಸಿ, ಮಗು ಇದೆ ಎಂದು ಏಕೆ ಬಿಂಬಿಸಲಾಗಿತ್ತು ಎಂದು ಪೊಲೀಸರು ವಿಚಾರಣೆ ವೇಳೆ ಪ್ರಶ್ನಿಸಿದ್ದಾರೆಂದು ತಿಳಿದುಬಂದಿದೆ.
    ಇನ್ನು ಬ್ಯಾಗ್ ನಲ್ಲಿ ಪತ್ತೆಯಾದ ಪತ್ರದಲ್ಲಿ ತನ್ನ ಅತ್ತೆ-ಮಾವಂದಿರು ತನಗೆ ನೀಡಿದ ಕಿರುಕುಳದ ಬಗ್ಗೆ ಬರೆದಿರುವುದು ಕಂಡು ಬಂದಿದೆ.ಮಗುವಿನ ಮೃತದೇಹವನ್ನು ಸೂಟ್ ಕೇಸ್ ನಲ್ಲಿ ಇರಿಸಿಕೊಂಡು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸುಚನಾ ಸಂಚಾರ ದಟ್ಟಣೆಯಿಂದಾಗಿ ಕ್ಯಾಬ್ ನಲ್ಲಿ 4 ಗಂಟೆಗಳ ಕಾಲ ಸಿಲುಕಿಕೊಂಡಿದ್ದಳು ಎಂಬ ವಿಚಾರ ಇದೀಗ ತಿಳಿದುಬಂದಿದೆ.
    ಒಂದು ವೇಳೆ ಕ್ಯಾಬ್ ನಲ್ಲಿ ಸಿಲುಕಿಕೊಳ್ಳದೇ ಹೋಗಿದ್ದರೆ, ಆಕೆ ಬೆಂಗಳೂರು ತಲುಪಿ ಬಿಡುತ್ತಿದ್ದಳು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
    ಏತನ್ಮಧ್ಯೆ, ಡಿಸೆಂಬರ್‌ನಲ್ಲಿ ತಮ್ಮ ಮಗನನ್ನು ಭೇಟಿಯಾಗಲು ಸುಚನಾ ತನ್ನ ಪತಿ ವೆಂಕಟ್ ರಾಮನ್ ಅವರಿಗೆ ಅವಕಾಶ ನೀಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
    ಡಿಸೆಂಬರ್ 7 ರಂದು ಗೋವಾದಲ್ಲಿದ್ದ ಸುಚನಾ ತನ್ನ ಗಂಡನ ವೀಡಿಯೊ ಕರೆಗೆ ಉತ್ತರಿಸಿದ್ದಳು. ಇದು ಮಗನೊಂದಿಗಿನ ರಾಮನ್ ಅವರು ಮಾತನಾಡಿದ್ದ ಕೊನೆಯ ಸಂಭಾಷಣೆಯಾಗಿತ್ತು ಎಂದು ತಿಳಿದುಬಂದಿದೆ.

    ಪತಿ ಹೋಲುತ್ತಿದ್ದ ಮಗ:
    ಗೋವಾ ಪೊಲೀಸರ ತನಿಖೆಯ ವೇಳೆ ಆಕೆಯ ಮಗುವಿನ ಮುಖ ಪತಿಯನ್ನೇ ಹೋಲುತ್ತಿತ್ತು ಇದೇ ಕಾರಣಕ್ಕೆ ಆಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
    ಮಗುವಿನ ಮುಖದ ಚಹರೆ ತನ್ನ ಪತಿಯ ಮುಖವನ್ನೇ ಹೋಲುತ್ತದೆ ಎಂದು ಮಹಿಳೆ ತನ್ನ ಸ್ನೇಹಿತರೊಂದಿಗೆ ಹಲವು ಬಾರಿ ಹೇಳಿಕೊಂಡಿದ್ದಳು ಎಂದು ತಿಳಿದು ಬಂದಿದೆ. ಆತನನ್ನು ನೋಡಿದಾಗಲೆಲ್ಲಾ ನನಗೆ ನನ್ನ ಪತಿಯ ಮುಖ ಮತ್ತು ನಮ್ಮಿಬ್ಬರ ನಡುವಿನ ಹಳೆಯ ಸಂಬಂಧ ನೆನಪಿಗೆ ಬರುತ್ತದೆ ಎಂದು ಸುಚನಾ ಹೇಳಿಕೊಂಡಿದ್ದರು. ಇದೇ ಮಗುವಿನ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    crime Karnataka Trending ಕಾಲೇಜು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleIPS ಗಳು‌ ಕೇಂದ್ರ ನಿಯೋಜನೆಗೆ ಹೋಗಲು‌ ಹಿಂದೇಟು
    Next Article ಲೈಂಗಿಕ ಕಿರುಕುಳ ನೀಡಿದ್ರಾ ವೈದ್ಯರು…? | Vajpayee Medical College
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Mbdzdx on February 13, 2026 5:26 pm

      betmgm Oklahoma online casino betmgm play betmgm Р Рђ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mukpmq on BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Tzuydn on ಜೈಲಿನಲ್ಲೇ ಕೊಲೆಯಾದ ಪಾತಕಿ.
    • Gttbgn on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.