Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕೋರ್ಟ್ ನಲ್ಲಿ ನಡೆಯಿತು ಬೆಚ್ಚಿಬೀಳಿಸುವ ಘಟನೆ | High Court
    Viral

    ಹೈಕೋರ್ಟ್ ನಲ್ಲಿ ನಡೆಯಿತು ಬೆಚ್ಚಿಬೀಳಿಸುವ ಘಟನೆ | High Court

    vartha chakraBy vartha chakraApril 3, 2024140 Comments2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:997,j:9062792074373784610,t:24040315
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.3: ರಾಜ್ಯ ಹೈಕೋರ್ಟ್ ‌ನಲ್ಲಿ (High Court) ನಾಟಕೀಯ ಹಾಗೂ ಆಘಾತಕಾರಿ ವಿದ್ಯಮಾನವೊಂದು ನಡೆಯುವ ಮೂಲಕ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
    ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಬ್ಲೇಡ್ ನಿಂದ ತಮ್ಮ ಕತ್ತು ಕೊಯ್ದುಕೊಂಡು‌ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಅಲ್ಲಿದ್ದವರು ಬೆಚ್ಚಿ ಬೀಳುವಂತಾಯಿತು.
    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು.

    ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್‌ನಂತಹ ಆಯುಧದಿಂದ ತಮ್ಮ ಕತ್ತು ಕೊಯ್ದುಕೊಂಡರು.
    ತಕ್ಷಣವೇ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು.
    ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋದರು.

    ಭದ್ರತೆ ಲೋಪ:
    ಹೈಕೋರ್ಟ್ ಒಳ ಪ್ರವೇಶಕ್ಕೆ ಭಾರಿ ಬಿಗಿ ಭದ್ರತೆ ಇದ್ದರೂ ಈ ವ್ಯಕ್ತಿ ಇಂತಹ ಆಯುಧದೊಂದಿಗೆ ಹೇಗೆ ಒಳ ಪ್ರವೇಶಿಸಿದರು ಮತ್ತು ಪೊಲೀಸರು ಏನು ಮಾಡುತ್ತಿರುತ್ತಾರೆ’ ಎಂದು ನ್ಯಾಯಮೂರ್ತಿ ಪ್ರಭಾಕರ ಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

    ವ್ಯಕ್ತಿ ಯಾರು ಗೊತ್ತಾ:
    ಕೋರ್ಟ್ ಹಾಲ್ ನಲ್ಲಿ ಕುತ್ತಿಗೆ ಕೊಯ್ದುಕೊಂಡ
    ವ್ಯಕ್ತಿಯ ಹೆಸರು ಚಿನ್ನಂ ಶ್ರೀನಿವಾಸ್. ಮೂಲತಃ ಮೈಸೂರಿನ ವಿಜಯನಗರದ ನಿವಾಸಿ. ಮುಖ್ಯ ನ್ಯಾಯಮೂರ್ತಿ ಅವರಿಗೆ ದೂರು ನೀಡಲು ತಮ್ಮ ಪತ್ನಿ ಜೊತೆ ಹೈಕೋರ್ಟ್‌ಗೆ ಬಂದಿದ್ದರು.ಅವರು ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಬಳಸುವ ಚಾಕುವನ್ನು ಶ್ರೀನಿವಾಸ್ ತಂದಿದ್ದರು.

    ಅಪಾರ್ಟ್ಮೆಂಟ್ ನಿರ್ಮಿಸಿ ಲಾಭ ಹಂಚಿಕೊಳ್ಳುವ ವಿಚಾರವಾಗಿ ಶ್ರೀನಿವಾಸ್ ಚಿನ್ನಂ ಮತ್ತವರ ಪಾಲುದಾರ ಶ್ರೀಧರ್ ರಾವ್ ಮತ್ತಿತರರೊಂದಿಗೆ ಒಪ್ಪಂದವಾಗಿತ್ತು. ಆದರೆ,ಪಾಲುದಾರು ಒಪ್ಪಂದ ಪಾಲಿಸದೇ 93 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ 2021ರಲ್ಲಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹಣ ಕೊಡದೆ ವಂಚನೆ ಮಾಡಿದ್ದಲ್ಲದೆ ನನ್ನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.ಈ ಸಂಬಂಧ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು.
    ಎಫ್ಐಆರ್ ಪ್ರಶ್ನಿಸಿ ಶ್ರೀಧರ್ ರಾವ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಿವಿಲ್ ವ್ಯಾಜ್ಯವಾಗಿರುವುದರಿಂದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ, ಸಿವಿಲ್ ಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿತ್ತು. ಇದರಿಂದ ಬೇಸರಗೊಂಡ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ದೂರು ನೀಡಲು ಬಂದಿದ್ದರು.ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಹತಾಶರಾಗಿ ಇಂತಹ ಕೃತ್ಯಕ್ಕೆ ಯತ್ನಿಸಿದರು ಎನ್ನಲಾಗಿದೆ.

    Verbattle
    Verbattle
    Verbattle
    court high court ಚಿನ್ನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಡಲತೀರದಲ್ಲಿ ಇತಿಹಾಸ ಸೃಷ್ಟಿಗೆ ಕಸರತ್ತು (ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ) | Dakshin Kannada
    Next Article ಅಮಿತ್ ಶಾ ಫೋನ್ ಕರೆಗೆ ಬೆಚ್ಚಿದ ಸದಾನಂದ ಗೌಡ | Amit Shah
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Gichardrep on Drugs peddler ಗಳ ಜೊತೆ ಇದ್ದ ಪೊಲೀಸರು.
    • Shanesoume on 83ನೇ ವಯಸ್ಸಿನಲ್ಲಿ ತಂದೆಯಾದ Al Pacino
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.