Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP
    Election

    ಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP

    vartha chakraBy vartha chakraSeptember 19, 20232 Comments1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ Electionಯಲ್ಲಿ ಸ್ಪರ್ಧಿಸಲು ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಪಡೆದು ವಂಚಿಸಿರುವ ಚೈತ್ರಾ ಕುಂದಾಪುರ ಪ್ರಕರಣದ ಮತ್ತೊಬ್ಬ ಆರೋಪಿ
    ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಅವರು ಚೈತ್ರಾ ಕುಂದಾಪುರ ಅವರ ಸಲಹೆಯ ಮೇರೆಗೆ ಗೋವಿಂದ ಬಾಬು ಪೂಜಾರಿಯಿಂದ ಹಣ ಪಡೆದಿದ್ದರು. ನಂತರದಲ್ಲಿ ಪೂಜಾರಿ ಪೊಲೀಸರಿಗೆ ವಂಚನೆಯ ಪ್ರಕರಣ ದಾಖಲಿಸುವುದಾಗಿ ಹೇಳಿದಾಗ ಹಂತ ಹಂತವಾಗಿ ಹಣ ವಾಪಸ್ ಕೊಡುವುದಾಗಿ ಹೇಳಿದ್ದರು. ಅದರೆ ನಂತರದಲ್ಲಿ ಯಾವುದೇ ಹಣ ನೀಡಿರಲಿಲ್ಲ.
    ಇದಾದ ಬಳಿಕ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಹಾಗೂ ಅವರ ಆಪ್ತರನ್ನು ಬಂಧಿಸಿದ ಸಿಸಿಬಿ ಪೊಲೀಸರು ಹಾಲಶ್ರೀ ಅವರ ಬಂಧನಕ್ಕೆ ಬಲೆ ಬೀಸಿದ್ದರು.

    ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದ್ದಾರೆ.

    ಹಾಲಶ್ರೀ ಅವರ ಬಂಧನಕ್ಕಾಗಿ ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಶ್ರೀ ಗಳ ಕಾರಿನ ಚಾಲಕನನ್ನು ವಶಕ್ಕೆ ಪಡೆದು ಆತ ನೀಡಿದ ಮಾಹಿತಿ ಆಧರಿಸಿ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ,ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.
    ಹಾಲಶ್ರೀ ಅವರು ಸಂಘ ಪರಿವಾರದ ನಾಯಕರಿಗೆ ಆಪ್ತರು ಎಂದು ನಂಬಿಸಿ ಹಲವರಿಂದ ಹಣ ಪಡೆದಿರುವ ಶಂಕೆಯಿದೆ. ಹೀಗಾಗಿ ಹಾಲಶ್ರೀ ಅವರ ಬಂಧನ ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರಲ್ಲಿ ಆತಂಕ‌ ಮೂಡಿಸಿದೆ.

    BJP Karnataka News Politics Election
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    Next Article ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    May 2, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    April 30, 2025

    2 Comments

    1. Ozvychivanie pomeshenii_jgSr on July 21, 2024 7:22 am

      озвучивание http://ozvuchivanie-pomeshhenij.ru/ .

      Reply
    2. Oborydovanie peregovornih komnat_cqsr on August 1, 2024 1:41 pm

      переговорные комнаты в москве переговорные комнаты в москве .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox on ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    • Geraldnax on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Geraldnax on ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe