ಬೆಂಗಳೂರು, ನ.1- ಕೌಸಲ್ಯ ಸುಪ್ರಜಾ ರಾಮಾ ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾ ಇದು. ಬಾಕ್ಸಾಪೀಸ್ ನಲ್ಲಿ ಯಶಸ್ವಿಯದ ಈ ಚಿತ್ರದ ನಟ ನಾಗಭೂಷಣ್ (Nagabhushan) ನಿರ್ಲಕ್ಷ್ಯ ದಿಂದ ಕಾರು ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾದ ಆರೋಪದಲ್ಲಿ ಸಿಲುಕಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ದಂಪತಿಗೆ ನಟ ನಾಗಭೂಷಣ್ ಚಲಾಯಿಸುತ್ತಿದ್ದ
ಕಾರು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಪತ್ನಿ ಮೃತ ಪಟ್ಟಿದ್ದಾರೆ. ಈ ಘಟನೆಗೆ ಸ್ಯಾಂಡಲ್‌ವುಡ್ ನಟ ನಾಗಭೂಷಣ್ ಕಾರಣ ಎಂದು ಅವರನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಅಪಘಾತದ ಕುರಿತು ನಟ ನಾಗಭೂಷಣ ಮಾತನಾಡಿ ರಾತ್ರಿ ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಅವರನ್ನು ಭೇಟಿ ಮಾಡಿಕೊಂಡು ವಾಪಸ್ ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ನನ್ನ ಕಾರಿನಲ್ಲಿ ಬರುತ್ತಿದ್ದೆ. ಸುಮಾರು 9.45 ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಪುರುಷ ಮಹಿಳೆಯು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುಂದೆ ಹೋಗಿ ಪುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು.
ತಕ್ಷಣ ನಾನು ಆಸ್ಪತ್ರೆಗೆ ಸೇರಿಸಬೇಕೆಂದು ಕಾರು ಸ್ಟಾರ್ಟ್ ಮಾಡಿದೆ. ಆದರೆ ಕಾರು ಸ್ಟಾರ್ಟ್ ಆಗಿಲ್ಲ. ಆಟೋರಿಕ್ಷಾದಲ್ಲಿ ಅಲ್ಲಿದ್ದ ಜನರ ಜತೆ ಸೇರಿಕೊಂಡು ಗಾಯಾಳುಗಳನ್ನು ಕೂರಿಸಿಕೊಂಡು ಅಸ್ಟ್ರಾ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದಾಗ ವೈದ್ಯರು ಬರುವ ದಾರಿಯ ಮಧ್ಯದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದಾರೆ. ರಾತ್ರಿಯೇ ನಾಗಭೂಷಣ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಿಂಕ್ಸ್ ಮಾಡಿಲ್ಲ ಎಂದು ಪತ್ತೆಯಾಗಿದೆ. ಇದು ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಅಲ್ಲʼʼ ಎಂದು ಕೂಡ ಮಾಹಿತಿ ಬಹಿರಂಗಗೊಂಡಿದೆ.
ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ ಎಸ್. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊದಲು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್ ಬಳಿಯ ಫುಟ್‌ಪಾತ್ ಮೇಲೆ ವಾಕಿಂಗ್ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


1 Comment
betmgm KY betmgm-play mgm online gambling