ಬೆಂಗಳೂರು,ಅ.31-
ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಿರುವ ನಗರದ ಸಂಚಾರ ಪೊಲೀಸರು ಒಂದೇ ದಿನ 1ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ, ನೋ ಎಂಟ್ರಿ ಪ್ರದೇಶದಲ್ಲಿ ವಾಹನ ನುಗ್ಗಿಸುವುದು, ದ್ವಿಚಕ್ರ ವಾಹನಗಳಲ್ಲಿ ಟ್ರಿಪಲ್ ರೈಡಿಂಗ್ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಟ್ರಾಫಿಕ್ ಪೊಲೀಸರು ಅ.29ರಂದು ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸಿದ 1,055 ಪ್ರಕರಣಗಳು ದಾಖಲಾಗಿವೆ.
ಇವುಗಳಲ್ಲಿ 812 ವಾಹನ ಚಾಲಕರ ವಿರುದ್ಧ ಏಕಮುಖ ಸಂಚಾರ ಇರುವಲ್ಲಿ ನಿಯಮ ಉಲ್ಲಂಘಿಸಿ ಎದುರಿನಿಂದ ಬಂದ ಮತ್ತು ನಿರ್ಬಂಧಿತ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. 127 ಚಾಲಕರಿಗೆ ಫುಟ್‌ಪಾತ್‌ನಲ್ಲಿ ವಾಹನ ನಿಲುಗಡೆ ಮಾಡಿದ್ದಕ್ಕಾಗಿ ಒಟ್ಟು 64,000 ರೂ. ದಂಡ ವಿಧಿಸಲಾಗಿದೆ.