Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್
    Viral

    ರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್

    vartha chakraBy vartha chakraJanuary 19, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.19- ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ.ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ನಗರದವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳು,ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು,ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

    ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಭದ್ರತೆಯಿಂದಾಗಿ ಜ.22ರಂದು ಯಾವುದೇ ಪೊಲೀಸ್ ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ.
    ಒಂದು ವೇಳೆ ರಜೆಯಲ್ಲಿರುವವರು ಕೂಡ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
    ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಹಳೆಯ ಆರೋಪಿಗಳು,ಸಮಾಜದ ಸ್ವಾಥ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
    ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆಯನ್ನು ತಿಳಿಸಿದ್ದಾರೆ.

    ಜ.22ರಂದು ರಾಜ್ಯದಲ್ಲಿ ಯಾವುದೇ ಧಾರ್ಮಿಕ ರ‍್ಯಾಲಿಗಳು,ಸಾವಿರಾರು ಸಂಖ್ಯೆಯಲ್ಲಿ ಜನ ಒಂದೆಡೆ ಸೇರಲು ಅವಕಾಶ ನೀಡದೇ ಜನಸಂದಣಿಯ ಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಸೂಚಿಸಲಾಗಿದೆ.
    ಕೋಮು‌ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವರ ಮೇಲೆ ಹೆಚ್ಚಿನ ಎಚ್ಚರಿಕೆ ಸಲಹೆ ನೀಡಿ ಅಗತ್ಯವಿದ್ದರೆ ವಿವಿಧ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿಕೊಳ್ಳಲು ಸಲಹೆ ನೀಡಲಾಗಿದೆ.

    ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಕೋಮು ಭಾವನೆ ಕದಡುವ ಪ್ರದೇಶಗಳು,ಕರಾವಳಿ ಭಾಗಗಳಲ್ಲೂ ಹೆಚ್ಚವರಿ ಪೊಲೀಸರ ನಿಯೋಜನೆ ಮಾಡಿ ಅಭೂತ ಪೂರ್ವ ಬಂದೋಬಸ್ಥ್ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದಾರೆ.

    Verbattle
    Verbattle
    Verbattle
    ಕಾನೂನು ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಶೋಭಾ ಕರಂದ್ಲಾಜೆ ಲೋಕಸಭೆಗೆ ಸ್ಪರ್ಧೆ ಮಾಡ್ತಾರಾ?
    Next Article ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    1 Comment

    1. Blembz on February 12, 2026 9:50 am

      mgm sportsbook login online casino betmgm play mgm on line

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • 1ace_slsr on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • 1ace_irsr on ಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.