ದೊಡ್ಡ ಬೆಳವಣಿಗೆಯೊಂದರಲ್ಲಿ, ಶನಿವಾರ ರಾತ್ರಿ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಮಾಫಿಯಾ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ವರದಿಗಳ ಪ್ರಕಾರ, ಅವರ ಮೇಲೆ ಯಾರು ಗುಂಡು ಹಾರಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ದಾಳಿಕೋರರನ್ನು ಬಂಧಿಸಲಾಗಿದೆ. ಅತೀಕ್ ಅಹ್ಮದ್ 2005 ರ ಬಿಎಸ್ಪಿ ಶಾಸಕ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಮತ್ತು ಈ ವರ್ಷದ ಫೆಬ್ರವರಿಯಲ್ಲಿ ನಡೆದ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಏಪ್ರಿಲ್ 13 ರಂದು ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಮಗ ಅಸದ್ ಪೊಲೀಸರಿಂದ ಕೊಲ್ಲಲ್ಪಟ್ಟ. ಅದಾದ ಕೆಲವು ದಿನಗಳಲ್ಲೇ ಈಗ ಇದು ಸಂಭವಿಸುತ್ತದೆ. ಪ್ರಯಾಗ್‌ರಾಜ್‌ನ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಗುಲಾಮ್‌ನೊಂದಿಗೆ ಅಸದ್ ಅನ್ನು ಕೊಲ್ಲಲಾಯಿತು. ಈ ಪ್ರಕರಣಗಳಿಂದ ಯುಪಿ ಪೊಲೀಸ್ ಮತ್ತು ಆ ರಾಜ್ಯದ ಸರ್ಕಾರದ ಮೇಲೆ ವಿಪಕ್ಷಗಳ ವಾಗ್ದಾಳಿ ಹೆಚ್ಚಾಗಿದೆ. ಉತ್ತರ ಪ್ರದೇಶ ಈಗ ರಕ್ತದೋಕುಳಿಯ ತಾಣವಾಗಿಬಿಟ್ಟಿದೆ ಎಂದು ಆರೋಪಿಸಲಾಗಿದೆ.
Previous ArticleIPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
Next Article ಚುನಾವಣೆ ಅಖಾಡದಲ್ಲಿ ಝಣಝಣ ಕಾಂಚಾಣ | Karnataka election |