Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಟೋ ರಿಕ್ಷಾ ಸ್ಪೋಟಕ್ಕೆ ಬೆಂಗಳೂರು ಲಿಂಕ್
    ಅಪರಾಧ

    ಆಟೋ ರಿಕ್ಷಾ ಸ್ಪೋಟಕ್ಕೆ ಬೆಂಗಳೂರು ಲಿಂಕ್

    vartha chakraBy vartha chakraNovember 22, 2022Updated:November 22, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.22- ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ನಗರದ ಲಿಂಕ್ ಇರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ.
    ಬಾಂಬ್ ಸ್ಫೋಟ ನಡೆಸಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಾರಿಕ್ ಸಂಪರ್ಕಿತ ರುಹುಲ್ಲಾ ನಗರದಲ್ಲಿ ಪತ್ತೆಯಾಗಿದ್ದಾನೆ.
    ಕೆಜಿ ಹಳ್ಳಿ ಸಮೀಪ ರುಹಲ್ಲಾ ಮೊಬೈಲ್ ಲೋಕೇಷನ್ ಪತ್ತೆಯಾಗಿದೆ. ಅಲ್ಲಿಗೆ ಭೇಟಿ ನೀಡಿ, ತನಿಖೆ ನಡೆಸಿದ ಪೊಲೀಸರು ಮೊಬೈಲ್, ಲ್ಯಾಪ್‌ಟಾಪ್ ಪರಿಶೀಲಿಸಿದಾಗ ಶಾರಿಕ್ ಜೊತೆ ರುಹುಲ್ಲಾ ನಿರಂತರ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ.
    ಬಳಿಕ ಶಂಕಿತ ರುಹಲ್ಲಾನನ್ನು ಮೈಸೂರು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಶಾರಿಕ್ ತನ್ನ ಸ್ನೇಹಿತ ಮಾಝ್ ಬಂಧನವನ್ನು ಸಹಿಸದ ಪ್ರತೀಕಾರಕ್ಕೆ ಇಳಿದು, ಬಾಂಬ್ ಸ್ಫೋಟಿಸಲು ಮುಂದಾಗಿದ್ದ. ಗುರು ಯಾಸೀನ್, ಸ್ನೇಹಿತ ಮಾಝ್ ಬಂಧನದ ಸೇಡಿಗೆ ಪ್ರತೀಕಾರ ತೀರಿಸಿಕೊಳ್ಳಲು ಹೀಗೆ ಮಾಡಿದ್ದ. ಅಲ್ಲದೇ, ಈ ಮೂವರು ಭಾರತವನ್ನು ಇಸ್ಲಾಂ ರಾಷ್ಟ್ರವಾಗಿ ಮಾಡುವ ಗುರಿ ಹೊಂದಿದ್ದರು ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.
    ಲಕ್ಷ-ಲಕ್ಷ ಹಣ:
    ಬಾಂಬ್ ಸ್ಫೋಟ ಪ್ರಕರಣದ ಬಳಿಕ ಶಾರಿಕ್ ಸಹೋದರಿಯರ ಖಾತೆಗೆ ಲಕ್ಷ- ಲಕ್ಷ ಹಣ ಹರಿದುಬಂದಿದೆ ಎಂದು ಹೇಳಲಾಗುತ್ತಿದೆ. ಇಷ್ಟೊಂದು ಹಣ ಶಾರೀಕ್‌ಗೆ ಬರುತ್ತಿದ್ದಿದ್ದು ಎಲ್ಲಿಂದ ಎನ್ನುವ ಪ್ರಶ್ನೆ ಉದ್ಭವವಾಗಿದೆ.
    ಭಾರತವನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಫಂಡಿಂಗ್ ಮಾಡ್ತಿದ್ದಾರಾ? ಶಾರಿಕ್‌ಗೂ ವಿದೇಶದಿಂದಲೇ ಫಂಡಿಂಗ್ ಮಾಡಲಾಗುತ್ತಿತ್ತು ಎನ್ನುವ ಅನುಮಾನ ವ್ಯಕ್ತವಾಗಿದೆ.
    ಮೂವರು ನಾಪತ್ತೆ:
    ಐಸಿಸ್ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾಗಿರುವ, 2020ರಿಂದ ನಾಪತ್ತೆಯಾಗಿರುವ ಮೂವರು ವ್ಯಕ್ತಿಗಳು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಖ್​ಗೆ ತಾಂತ್ರಿಕ ಹಾಗೂ ಹಣಕಾಸು ನೆರವು ನೀಡಿರಬಹುದು. ಅವರೇ ಈತನ ‘ಹ್ಯಾಂಡ್ಲರ್​’ ಸಹ ಆಗಿರಬಹುದು.
    ಪೊಲೀಸ್ ಪರಿಭಾಷೆಯಲ್ಲಿ ‘ಹ್ಯಾಂಡ್ಲರ್’ ಎಂದರೆ ಉಗ್ರಗಾಮಿ ಚಟುವಟಿಕೆ ನಡೆಸಲು ಗುರುತಿಸಿದ ವ್ಯಕ್ತಿಯ ಕಾರ್ಯನಿರ್ವಹಣೆಯನ್ನು ದೂರದಿಂದಲೇ ನಿಯಂತ್ರಿಸುವುದು ಎಂಬ ಅರ್ಥವಿದೆ ಎಂದು
    ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್ ತಿಳಿಸಿದ್ದಾರೆ.
    ಐಸಿಸ್ ಜೊತೆಗೆ ನಂಟು:
    ಐಸಿಸ್ ಜೊತೆಗೆ ನಂಟು ಹೊಂದಿರುವ ಶಂಕೆ ಇರುವ ಮುಸಾಬಿರ್ ಹುಸೇನ್, ಅಬ್ದುಲ್ ಮಥೀನ್ ತಾಹಾ ಮತ್ತು ಅರಾಫತ್ ಅಲಿ ಜಂಟಿಯಾಗಿ ಶಾರಿಕ್​ನ ಚಟುವಟಿಕೆಗಳನ್ನು ನಿರ್ವಹಿಸಿರುವ ಸಾಧ್ಯತೆಯಿದೆ. ಅವರೇ ಶಾರಿಕ್​ಗೆ ಹಣಕಾಸು ಹೊಂದಿಸಿಕೊಡುವುದರ ಜೊತೆಗೆ ಹ್ಯಾಂಡ್ಲರ್​ಗಳಾಗಿಯೂ ಕಾರ್ಯನಿರ್ವಹಿಸಿರಬಹುದು ಎಂದು ತಿಳಿಸಿದರು.
    ಶಾರಿಕ್​ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಾಸಿ ಎಂದು ಸ್ಪಷ್ಟವಾಗಿದೆ. ಈತನ ಮೇಲೆ ಈ ಮೊದಲು ಮೂರು ಪ್ರಕರಣಗಳು ದಾಖಲಾಗಿವೆ. ಮುಸಾಬಿರ್ ಹುಸೇನ್ ಮತ್ತು ಮಥೀನ್ ತಾಹಾ ವಿರುದ್ಧ 2020ರಲ್ಲಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು.
    ನಾಲ್ವರನ್ನು ಬಂಧನ:
    ಇನ್ನು ಗೋಡೆ ಬರಹ ಪ್ರಕರಣದಲ್ಲಿ ತಲೆಮರೆಸಿಕೊಂಡ ಅರಾಫತ್ ಅಲಿ ದುಬೈನಲ್ಲಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಾಲ್ವರನ್ನು ಬಂಧಿಸಲಾಗಿದೆ. ಮೈಸೂರಿನ ಇಬ್ಬರು, ಮಂಗಳೂರಿನ ಒಬ್ಬ ಹಾಗೂ ಊಟಿಯಿಂದ ಒಬ್ಬನನ್ನು ಬಂಧಿಸಿ ಕರೆತರಲಾಗಿದೆ ಎಂದರು.
    ಕೊಯಮತ್ತೂರು, ಕೇರಳ, ತಮಿಳುನಾಡು ತಿರುಗಾಡಿ ಕಳೆದ ಸೆ.20ರಂದು ಮೈಸೂರಿಗೆ ಶಾರಿಕ್ ಬಂದಿದ್ದ. ಮೈಸೂರಿನ​ ಲೋಕ ನಾಯಕ ನಗರದಲ್ಲಿ ಮೋಹನ್‍ಕುಮಾರ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದನು. ಮನೆ ಮಾಲೀಕರಿಗೆ ಈತನ ಬಗ್ಗೆ ಗೊತ್ತಿರಲಿಲ್ಲ. ಹುಬ್ಬಳ್ಳಿ-ಧಾರವಾಡ ನಿವಾಸಿ ಪ್ರೇಮ್‍ರಾಜ್ ಎಂಬ ಆಧಾರ್ ಕಾರ್ಡ್ ಹೊಂದಿದ್ದನು ಎಂದು ಹೇಳಿದರು.

    ಉಗ್ರ ಕಾನೂನು ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಯಾಕೆ ಹೀಗೆ?
    Next Article ಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025

    ನಾಲ್ವರಿಗೆ ಒಲಿದ ಅದೃಷ್ಟ !

    August 26, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    August 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • inernetadresmam on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • mostbet_kg_iaEi on ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress
    • http://italslovar1.ru/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe