ಬೆಂಗಳೂರು,ಜೂ.25-ಆಟೋಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ
ಖತರ್ನಾಕ್ ಕಳ್ಳನೊಬ್ಬನನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿ 16 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸಿದ್ದಾಪುರದ 1ನೇ ಮುಖ್ಯ ರಸ್ತೆಯ ಶೇಕ್ ವಸೀಮ್(28)ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಬಂಧಿತನಿಂದ 16 ಲಕ್ಷ ಮೌಲ್ಯದ 8 ಆಟೋ ರಿಕ್ಷಾಗಳನ್ನು ವಶಪಡಿಸಿಕೊಂಡ ಇ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
ಕಳೆದ ಜೂ.21 ರಂದು ಮುಂಜಾನೆ 2ರ ವೇಳೆ ಕಲಾಸಿಪಾಳ್ಯದ ಮಾರ್ಕೆಟ್ ಬಳಿ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರಲು ಹೋಗಿದ್ದ ಆಟೋ ರಿಕ್ಷಾವನ್ನು ಕಳವು ಮಾಡಿದ ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಕಲಾಸಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಚೇತನ್ ಕುಮಾರ್.ಎಂ.ಎಲ್ ಮತ್ತವರ ಸಿಬ್ಬಂದಿ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯು ಕಲಾಸಿಪಾಳ್ಯ ಪೊಲೀಸ್ ಠಾಣಾ ಸರಹದ್ದಿನಲ್ಲಿ ಹಾಗು ಬೇರೆ ಬೇರೆ ಕಡೆಗಳಲ್ಲಿ ಆಟೋ ರಿಕ್ಷಾ ವಾಹನಗಳನ್ನು ಕಳವು ಮಾಡಿರುವುದಾಗಿ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು16 ಲಕ್ಷಮೌಲ್ಯದ 8 ಆಟೋ ರಿಕ್ಷಾಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.