ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ.
ಶುಕ್ರವಾರದಂದು ಯುವತಿಗೆ ಐದನೇ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿತ್ತು. ಇದಾದ ಬಳಿಕ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಶಸ್ತ್ರಚಿಕಿತ್ಸೆ ಬಳಿಕ ಯುವತಿಗೆ ಜ್ವರ ಹಾಗೂ ಆಮ್ಲಜನಕ ಮಟ್ಟದಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಈ ವಿಚಾರವಾಗಿ ಮಾತನಾಡಿದ ಸೇಂಟ್ ಜಾನ್ಸ್ ಆಸ್ಪತ್ರೆ ವೈದ್ಯ ಡಾ. ಅರವಿಂದ ಕಸ್ತೂರಿ, ಯುವತಿಗೆ ಆ್ಯಸಿಡ್ ದಾಳಿಯಿಂದ 36 ಪ್ರತಿಶತ ಭಾಗ ಸುಟ್ಟು ಹೋಗಿದೆ. ಇದರಲ್ಲಿ ಕೀವು ತುಂಬುವ ಸಾಧ್ಯತೆ ಇದೆ ಎಂದಿದ್ದಾರೆ.