ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ರಪೀಸಾಬ್, ಬಸವರಾಜು ಅವರ ರಕ್ಷಣಾ ಕಾರ್ಯ ಮುಂದುವರಿದಿದೆ. ಇಬ್ಬರು ಕಾರ್ಮಿಕರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ನೃಪತುಂಗ ರಸ್ತೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆ ಮುಂಭಾಗದಲ್ಲಿ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದು ದುರ್ಘಟನೆ ಸಂಭವಿಸಿದೆ.
Previous Articleಡಾ.ಜಿಎಸ್ಸೆಸ್ ಪ್ರತಿಷ್ಠಾನಕ್ಕೆ ಎಸ್.ಜಿ. ಸಿದ್ದರಾಮಯ್ಯ ರಾಜೀನಾಮೆ
Next Article ಮಗಳ ಮೃತದೇಹದ ಜೊತೆ ನಾಲ್ಕು ದಿನ ಕಳೆದ ತಾಯಿ