ಬೆಂಗಳೂರು, ಜು.1-ನಕಲಿ ಕೀ ಬಳಸಿ ಇಲ್ಲವೇ ಹ್ಯಾಂಡಲ್ ಲಾಕ್ ಮುರಿದು ಬೈಕ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಆಶೋಕನಗರ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲದ ಲಕ್ಷ್ಮಣ್ ರಾವ್ ನಗರದ ಅಂತೋಣಿ ಅಲಿಯಾಸ್ ತೋಪೆಕ್(25) ಬಂಧಿತ ಆರೋಪಿಗಳಾಗಿದ್ದು ಆತನಿಂದ 10 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.
ಕಳೆದ ಜೂ.29 ರಂದು ಆಶೋಕ ನಗರದಲ್ಲಿ ಮಾಡಿದ ಬೈಕ್ ಕಳವು ಪ್ರಕರಣವನ್ನು ಬೆನ್ನತ್ತಿದ ಆಶೋಕ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯು ಹಿಂದೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿ ಜೈಲಿಗೆ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದು ಸುಲಭವಾಗಿ ಹಣಗಳಿಸಲು ಕಳ್ಳತನ ಕೃತ್ಯಕ್ಕೆ ಇಳಿದಿದ್ದ ಎಂದರು.
ಆಡುಗೋಡಿ, ಆಶೋಕನಗರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಆರೋಪಿಯು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ ಪ್ರಕರಣ ಬೇಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Previous Articleಡೊಳ್ಳು ಕಲಾವಿದರ ಕಥೆ ವ್ಯಥೆ
Next Article ದೇಶದಲ್ಲಿ 17,070 ಜನರಿಗೆ ಕೊರೋನಾ ಸೋಂಕು, 23 ಜೀವಹಾನಿ