ಬೆಂಗಳೂರು : ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಆರೋಪ ಪ್ರಕರಣದಲ್ಲಿ ಜಾರಕಿಹೊಳಿ ಅವರಿಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
ತನಿಖಾ ವರದಿಯನ್ನು ಯಾವುದೇ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಆದೇಶಿಸಿದೆ.
ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿರುವುದರ ಸಿಂಧುತ್ವ & ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ ಪ್ರತ್ಯೇಕ ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಎಸ್‌ಐಟಿ ಸಾಂವಿಧಾನಿಕ ಸಿಂಧುತ್ವ ನಿರ್ಧರಿಸುವ ವಿಚಾರವು ಹಾಲಿ ಪ್ರಕರಣಕ್ಕೂ ಅನ್ವಯಿಸುವುದರಿಂದ ಯಾವುದೇ ತೆರನಾದ ತನಿಖಾ ವರದಿಗಳನ್ನು ಯಾವುದೇ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಎಂದು ಎಸ್‌ಐಟಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
ಯುವತಿಯೊಬ್ಬರ ಜೊತೆ ರಮೇಶ್ ಜಾರಕಿಹೊಳಿ ಅವರಿರುವ ಅಶ್ಲೀಲ ವೀಡಿಯೊವೊಂದನ್ನು ಇಂಟರ್‌ನೆಟ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪಿಗಳು ಎನ್ನಲಾದ ಎಸ್ ಶ್ರವಣ್ ಕುಮಾರ್ ಮತ್ತು ತುಮಕೂರು ಜಿಲ್ಲೆಯ ನರೇಶ್ ಬಿ ಎಂ ಅವರ ಪ್ರಕರಣವನ್ನೂ ಪ್ರಮುಖ ಪ್ರಕರಣದೊಂದಿಗೆ ವಿಚಾರಣೆ ನಡೆಸಲು ಪೀಠ ಸಮ್ಮತಿಸಿದೆ.
Previous Articleಜುಲೈ 30ರಂದು ಸಿಇಟಿ Result
Next Article ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ