ಜೈಪುರ: ರಾಜಸ್ತಾನದ ಉದಯ್‌ಪುರದಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕನ್ಹಯ್ಯ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಲಾಗಿದೆ.
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಟ್ಟೆ ಹೊಲಿಸುವ ನೆಪದಲ್ಲಿ ಕನ್ಹಯ್ಯ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜೂನ್ 17ರಂದೇ ಈ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಮಂಗಳವಾರ ಹತ್ಯೆಯ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದೀಗ ಉದಯ್‌ಪುರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
ನೂಪುರ್ ಶರ್ಮಾ ಪರ ಮಾತನಾಡಿದ್ದಕ್ಕಾಗಿ ಹಾಡಹಗಲೇ ವ್ಯಕ್ತಿಯ ಶಿರಚ್ಚೇದನ ಮಾಡಿ, ಪ್ರಧಾನಿಗೂ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ಆತಂಕಕ್ಕೀಡುಮಾಡಿದೆ.
ರಾಜಸ್ಥಾನದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ರಾಷ್ಟ್ರೀಯ ತನಿಖಾ ದಳ(ಎನ್ಐಎ) ರಾಜಸ್ಥಾನದ ಉದಯಪುರಕ್ಕೆ ಆಗಮಿಸಿದೆ.
ಎನ್‌ಐಎ ತಂಡ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿ ನೇತೃತ್ವದ ತಂಡ ಈಗಾಗಲೇ ಉದಯಪುರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.
ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ. ರಾಜಸ್ಥಾನದ ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಮುಂದಿನ 30 ದಿನಗಳ ಕಾಲ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.