ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಲ್ಲೇ,ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದುಗೊಳಿಸಿ, ವರದಿ ತಿರಸ್ಕರಿಸುವಂತೆ ಆಗ್ರಹಗಳೂ ಕೇಳಿಬಂದಿವೆ.
ಇದೀಗ ಈ ಸಾಲಿಗೆ ಸಾಣೆಹಳ್ಳಿ ಮಠ ಸೇರ್ಪಡೆಯಾಗಿದೆ.
ಈ ಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಮಠಾಧೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪಠ್ಯ ಪರಿಷ್ಕರಣಾ ಸಮಿತಿ ವಚನಕಾರ ಬಸವಣ್ಣನ ಕುರಿತು ತಪ್ಪು ಅಭಿಪ್ರಾಯಗಳನ್ನು ಉಲ್ಲೇಖಿಸಿದೆ.
ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ಪ್ರಜಾಪ್ರಭುತ್ವವನ್ನು ತಿಳಿಸಬೇಕು. ಆದರೆ, ಪ್ರಜಾಪ್ರಭುತ್ವಕರಣ ಬಿಟ್ಟು ಕೇಸರೀಕರಣ ಮಾಡಲಾಗುತ್ತಿದೆ ಎಂದು ಹೇಳಿರುವ ಅವರು ಬಸವಣ್ಣನವರು ಸರಳಗನ್ನಡವನ್ನು ಬಳಸಿ ಚಳವಳಿಯನ್ನು ಜನಮುಖಿಯಾಗಿಸಿದರು ಎಂಬ ಸಾಲುಗಳನ್ನು ಕೈಬಿಡಲಾಗಿದೆ ಅದೇ ರೀತಿ ಪಠ್ಯ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಹಲವು ಅಂಶಗಳನ್ನು ತಿರುಚಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತಕ್ಷಣವೇ ಈ ಪಠ್ಯ ಪುಸ್ತಕ ವಾಪಸು ಪಡೆದು ಹಳೆಯ ಪುಸ್ತಕ ಬೋಧನೆಗೆ ಬಳಸಬೇಕು ತಪ್ಪಿದಲ್ಲಿ ಇದರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.